ಮಹಿಳೆ ಕಾಣೆ; ಪತ್ತೆಗೆ ಮನವಿ
:
ಧಾರವಾಡ:- ನಗರದ ಯತ್ತಿನಗುಡ್ಡ ನೀರಿನ ಟ್ಯಾಂಕ್ ಹತ್ತಿರದ ನಿವಾಸಿಯಾದ 26 ವರ್ಷದ ಲಕ್ಷ್ಮೀ ಕೋಂ ದುರ್ಗಪ್ಪ ಜಮನಾಳ ಎಂಬ ಮಹಿಳೆ ಜುಲೈ 21, 2023 ರಂದು ಬೆಳಿಗ್ಗೆ 9-15 ಗಂಟೆ ಸುಮಾರಿಗೆ ಮನೆಯಿಂದ ಹೇಳದೆ ಕೆಳದೆ ಎಲ್ಲಿಯೋ ಹೋಗಿ ಕಾಣೆಯಾಗಿದ್ದಾರೆ ಎಂದು ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ಮಹಿಳೆಯ ಎತ್ತರ 5 ಫೂಟ್, ಸಧೃಡ ಮೈಕಟ್ಟು, ಗೋಧಿಗೆಂಪು ಮೈ ಬಣ್ಣ, ದುಂಡು ಮುಖ, ಅಗಲವಾದ ಮೂಗು, ತಲೆಯಲ್ಲಿ 1.5 ಫೂಟ ತೆಳ್ಳಗಿನ ಮೈಕಟ್ಟು, ದುಂಡು ಮುಖ, ದಪ್ಪ ಮೂಗು, ತಲೆಯಲ್ಲಿ ಉದ್ದನೆಯ ಕಪ್ಪು ಕೂದಲು, ಹಣೆಯ ಮೇಲೆ ಕಪ್ಪು ಹಚ್ಚೆಯ ಕಲೆ ಇದೆ. ಎರಡು ಕೈಗಳ ಮೇಲೆ ಗಂಡ ಹಾಗೂ ತನ್ನ ಮಕ್ಕಳ ಹೆಸರನ್ನು ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಅಚ್ಚೆ ಹಾಕಿಸಿರುತ್ತಾಳೆ. ಕರಿ ಹಾಗೂ ಬಿಳಿ ಬಣ್ಣದ ಚೂಡಿದಾರ ಧರಿಸಿರುತ್ತಾಳೆ. ಕನ್ನಡ, ಭಾಷೆಯನ್ನು ಮಾತನಾಡುತ್ತಾಳೆ.
ಇವರ ಸುಳಿವು ಸಿಕ್ಕವರು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಕಂಡು ಬಂದಲ್ಲಿ ಅಥವಾ ಏನಾದರು ಮಾಹಿತಿ ಲಭ್ಯವಾದಲ್ಲಿ ತಕ್ಷಣ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಂಟ್ರೋಲ್ ರೂಮ್-0836-2233555/100 ಅಥವಾ ಧಾರವಾಡ ಉಪನಗರ ಪೊಲೀಸ್ ಠಾಣೆ-0836-2233511/9480802033 ಗೆ, ಪಾಲಕರು-9945595276 ಸಂಪರ್ಕಿಸಬಹುದೆಂದು ಉಪನಗರ ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇದನ್ನೂ ಓದಿ

ಬೊಂಗೊಧಾರಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಯಲಹಂಕದಲ್ಲಿ ವಿಜೃಂಭಣೆಯ ದುರ್ಗಾ ಪೂಜೆ 2026​ಯಲಹಂಕ ಸುದ್ದಿ:ಬೆಂಗಳೂರಿನ ಯಲಹಂಕದ ವೈಟ್ ಪರ್ಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ರೇವ ಕಾಲೇಜ್ ಮುಖ್ಯ ರಸ್ತೆ, ಬೆಳ್ಳಿಹಳ್ಳಿ ಕ್ರಾಸ್) ಬೊಂಗೋಧರ ಸಾಂಸ್ಕೃತಿಕ ಸಂಘದ (Bongodhara Cultural Association) ನೇತೃತ್ವದಲ್ಲಿ ದುರ್ಗಾಪೂಜೆ 2026 ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.​ಕಾರ್ಯಕ್ರಮದ ವಿಶೇಷತೆಗಳು:​ಈ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.​ಆಗಮಿಸಿದ ಭಕ್ತರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.​ವ್ಯಾಪಾರಸ್ಥರಿಗಾಗಿ ಪ್ರತ್ಯೇಕವಾಗಿ ಸ್ಟಾಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.​ಪ್ರತಿ ವರ್ಷದಂತೆ ಈ ಬಾರಿಯೂ ಈ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ಸಡಗರದಿಂದ ನಡೆಯುತ್ತಿದೆ.