
ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರ ಅವೈಜ್ಞಾನಿಕ ಆದೇಶ ನಿಯಮಗಳ ವಿರುದ್ಧ ಬೆಂಗಳೂರು ನಗರ ಜಿಲ್ಲೆ ಪಂಚಾಯತಿ ವ್ಯಾಪ್ತಿಯ ಆರ್ ಡಿ ಪಿ ಆರ್ ಕುಟುಂಬ ಇಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಆವರಣ ಬನಶಂಕರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿತ್ತು . ರಾಜ್ಯ ವ್ಯಾಪಿ ನಡೆಯುತ್ತಿರುವ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆಯಾ ಜಿಲ್ಲಾ ಕೇಂದ್ರಗಳ ಮುಂದೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಹೋರಾಟ ಹಮ್ಮಿಕೊಂಡಿವೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಭದ್ರತೆ ಸರ್ಕಾರದಿಂದ ವಿವಿಧ ಸೌಲಭ್ಯ ಕಾರ್ಯದರ್ಶಿಗಳು ಮತ್ತು ದ್ವಿತೀಯ ದರ್ಜೆ ಸಹಾಯಕರು ಮತ್ತು ಸಿಬ್ಬಂದಿಗಳಿಗೆ ಉನ್ನತ ಶ್ರೇಣಿ ನಿಯೋಜನೆ ವಿಮೆ ಇಎಸ್ಐ ಪಿಎಫ್ ಹಾಗೂ ಇತರ ಸೌಲಭ್ಯಗಳನ್ನು ನೀಡುವಂತೆ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ರಮೇಶ್ ಮತ್ತು ಕರ್ನಾಟಕ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಸಂಘದ ರಾಜ್ಯ ಕಾರ್ಯಧ್ಯಕ್ಷರಾದ ನಾರಾಯಣಸ್ವಾಮಿ ರವರ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಹೋರಾಟ ಪ್ರತಿಭಟನೆ ಮಾಡಲಾಯಿತು ನಂತರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಲತಾ ಕುಮಾರಿ ರವರಿಗೆ ಸರ್ಕಾರದ ಗಮನಕ್ಕೆ ತರುವಂತೆ ಬೇಡಿಕೆಗಳ ಮನವಿ ಪತ್ರ ಸಲ್ಲಿಸಲಾಯಿತು ಇದೇ ಸಂದರ್ಭದಲ್ಲಿ ಬೆಂಗಳೂರು ನಾಗರಾಜ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಎಲ್ಲಾ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಾರ್ಯದರ್ಶಿಗಳು ದ್ವಿತೀಯ ದರ್ಜೆ ಸಹಾಯಕರು ಡಿ ಗ್ರೂಪ್ ನೌಕರರು ಸಿಬ್ಬಂದಿಗಳು ಅನಿರ್ದಿಷ್ಟಾವಧಿ ಹೋರಾಟದಲ್ಲಿ ಭಾಗವಹಿಸಿದ್ದರು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಪ್ರತಿಭಟನೆ ಹಮ್ಮಿ ಕೊಂಡಿದ್ದಾರೆ . ನಮ್ಮ ಬೇಡಿಕೆಗಳು ಈಡೇರುವವರೆಗೆ ಪ್ರತಿಭಟನೆ ಕೈ ಬಿಡುವುದಿಲ್ಲ ಸರ್ಕಾರ ಮತ್ತು ಆಡಳಿತ ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ರಮೇಶ್ ರವರು ಒತ್ತಾಯಿಸಿದರು ಹಾಗೂ ಮನವಿ ಸಲ್ಲಿಸಿದರು
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ
Public power
R Hanumanthu
kogilu layout
Yelahanka
banglore
9845085793
7349337989
