ಯಲಹಂಕ

ಯಲಹಂಕ ಉಪನಗರದಲ್ಲಿ ಜಯಲಕ್ಷ್ಮಿ ಕುಟುಂಬದವರು ದಸರಾ ಗೊಂಬೆ ಕುರಿಸುವ ಮುಖಾಂತರ ವಿಜಯದಶಮಿ ಮತ್ತು ಆಯುಧ ಪೂಜೆ ಬಹಳ ವಿಜೃಂಭಣೆಯಿಂದ ನೆರವೇರಿಸಿದಾರೆ

. ಗೊಂಬೆಗಳ ಹಬ್ಬದ  ವಿಶೇಷ ಏನೆಂದರೆ.  ಇದು ದಕ್ಷಿಣ ಭಾರತದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳು ನಾಡಿನಲ್ಲಿ ಜನಪ್ರಿಯ, ಕನ್ನಡದಲ್ಲಿ ಇದನ್ನು ಗೊಂಬೆ ಹಬ್ಬ ಎಂದೂ ಕರೆಯುತ್ತಾರೆ.

ದಸರಾ ಗೊಂಬೆ ಕೂರಿಸುವ ಪದ್ಧತಿ 18 ನೇ ಶತಮಾನದಿಂದ ಮನೆಮನೆಯಲ್ಲೂ ಜಾರಿಗೆ ಬಂದಿತು ಎನ್ನಬಹುದು.ಇಂದಿನ ಜೀವನ ಕ್ರಮದಲ್ಲಿ ಇದು ಕಡಿಮೆ ಕಾಣಲು ಸಿಗುತ್ತದೆ. ಆದರೆ ಯಾರು ಹಿಂದಿನಿಂದಲೂ ಈ ಸಂಪ್ರದಾಯವನ್ನು ಆಚರಿಸುತ್ತಾ ಬಂದಿದ್ದಾರೋ, ಅಂತಹವರ ಮನೆಯಲ್ಲಿ ಈ ಗೊಂಬೆ ಮನೆಯನ್ನು ನೋಡಬಹುದು.

ದಸರಾ ಹಬ್ಬದಲ್ಲಿ ಮನೆ ಮನೆಗಳಲ್ಲಿ ಗೊಂಬೆಗಳನ್ನು ಕೂರಿಸುವ ಪದ್ಧತಿಯು ಮೈಸೂರು ಪ್ರಾಂತ್ಯದಲ್ಲಿ ಮೊಟ್ಟಮೊದಲು ಆರಂಭವಾಯಿತು ಎನ್ನಲಾಗುತ್ತದೆ. ಮೈಸೂರು ದಸರಾ ಎಂದು ಜಗತ್ ಪ್ರಸಿದ್ಧಿ ಪಡೆದಿರುವ ಆಚರಣೆ ಮೈಸೂರು ಅರಮನೆಯಲ್ಲಿ ನಡೆದರೆ, ಮೈಸೂರು ರಾಜರ ಪ್ರಜೆಗಳೆಲ್ಲರ ಮನೆಯಲ್ಲಿ ಹಬ್ಬದ ಸಂಭ್ರಮವಾಗಿ ಪಟ್ಟದ ಗೊಂಬೆಗಳನ್ನು ಇಟ್ಟು ಪೂಜಿಸುವ ಪದ್ಧತಿ ಬೆಳೆದುಕೊಂಡು ಬಂತು. ಗೊಂಬೆ ಕೂರಿಸಲು ಸಾಕಷ್ಟು ತಯಾರಿ ಬೇಕಾಗುತ್ತದೆ. ಪ್ರತಿವರ್ಷ ಒಂದು ನಿರ್ದಿಷ್ಟ ವಿಷಯ(ಥೀಮ್) ಇಟ್ಟುಕೊಂಡು ಮನೆಗಳಲ್ಲಿ ಗೊಂಬೆ ಕೂರಿಸುತ್ತಾರೆ, ನಮ್ಮ ದೇಶದ ಪೌರಾಣಿಕ ಹಿನ್ನೆಲೆ, ಕಲೆ, ಸಂಪ್ರದಾಯ, ಜನ ಜೀವನವನ್ನು ದಸರಾ ಬೊಂಬೆಗಳು ಸಾರುತ್ತದೆ.

ಗೊಂಬೆಗಳನ್ನು ಕೂರಿಸುವ ವಿಧಾನ: ಮನೆಗಳಲ್ಲಿ ಗೊಂಬೆ ಕೂರಿಸುವಾಗ ಸ್ಥಳಾವಕಾಶ ನೋಡಿಕೊಂಡು 3,5,7,9 ಹಂತಗಳಲ್ಲಿ ಕೂರಿಸುತ್ತಾರೆ. ಹೆಚ್ಚು ಗೊಂಬೆಗಳು ಇದ್ದವರು 9 ಹಂತಗಳಲ್ಲಿ ಕೂರಿಸಿದರೆ, ಇನ್ನು ಕೆಲವರು 7 ಹಂತಗಳಲ್ಲಿ, ಕೆಲವರು 5 ಹಂತಗಳಲ್ಲಿ ಕೂರಿಸುತ್ತಾರೆ. ಗೊಂಬೆಗಳನ್ನು ಕೂರಿಸಲು ಮರದ ಸ್ಟ್ಯಾಂಡ್‌ಗಳನ್ನೂ ಬಳಸುತ್ತಾರೆ. ಮರದ ಸ್ಟ್ಯಾಂಡ್ ಇಲ್ಲದಿದ್ದರೆ ಸ್ಟೀಲ್ ಸ್ಟ್ಯಾಂಡ್‌ನ್ನೂ ಬಳಸಬಹುದು. ಮೊದಲ ಅಂತಸ್ತಿನಲ್ಲಿ ಪಟ್ಟದ ಬೊಂಬೆ, ಕಲಶ, ಗಣಪತಿ, ಮನೆ ದೇವರು, ದೀಪಗಳು ಇವುಗಳನ್ನಿಟ್ಟು, ಎರಡು, ಮೂರು ಉಳಿದ ಅಂತಸ್ತುಗಳಲ್ಲಿ ಇತರ ಬೊಂಬೆಗಳನ್ನು ಜೋಡಿಸುತ್ತಾರೆ. ಇನ್ನು ಅನೇಕ ರೀತಿಯಲ್ಲಿ ಗೊಂಬೆಗಳು ಕುರಿಸುವ ಮುಖಾಂತರ ಹಬ್ಬವನ್ನು ಬಹಳ ವಿಜೃಂಭಣೆಯಿಂದ ನಿರ್ವಹಿಸುತ್ತಾರೆ ಇಂತಹ ಸಂಭ್ರಮಗಳು ಇತ್ತೀಚಿನ ದಿನಗಳಲ್ಲಿ  ಕಡಿಮೆಯಾಗುತ್ತಾ ಬರುತ್ತಿವೆ ಮುಂದಿನ ದಿನಗಳಲ್ಲಿ ಇಂತಹ ಸಂಭ್ರಮ ಸಡಗರ ಬಹಳ ಹೆಚ್ಚಿನ ಸಂಖ್ಯೆಯಲ್ಲಿ  ನೆರವೇರಬೇಕು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ಅನುಕೂಲವಾಗುತ್ತದೆ.      ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಾಗಿ ಹಬ್ಬ ಸಂಭ್ರಮ ನಡೆಯಲಿ ಆ ತಾಯಿ ಚಾಮುಂಡೇಶ್ವರಿ ದೇವಿ ಎಲ್ಲರಿಗೂ ಸುಖ ಸಂತೋಷ ನೆಮ್ಮದಿ ನೀಡಲಿ

Leave a Reply

Your email address will not be published. Required fields are marked *