ಯಲಹಂಕ : ಯಲಹಂಕ ಉಪನಗರದಲ್ಲಿ ಇರುವ ಯಲಹಂಕ ಕ್ಷೇತ್ರ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಪ್ರಯುಕ್ತ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ಇದೇ ವೇಳೆ ಶಾಸಕ ಎಸ್ ಆರ್ ವಿಶ್ವನಾಥ್ ಮಾತನಾಡಿ ದೇಶಾದ್ಯಂತ ದುರ್ಗಾಪೂಜೆಯನ್ನು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಗುತ್ತಿದೆ, ಅಂತೆಯೇ ರಾಜ್ಯದಲ್ಲಿ ನಾಡದೇವತೆ ಚಾಮುಂಡೇಶ್ವರಿಯ ದಸರಾ ಉತ್ಸವ ನೆರವೇರಿಸಲಾಗುತ್ತಿದೆ. ವಿಜಯದಶಮಿಯ ಈ ಶುಭ ಸಂದರ್ಭದಲ್ಲಿ ದುಷ್ಠ ಶಿಕ್ಷೆ ಶಿಷ್ಟ ರಕ್ಷಣೆ ಮಾಡುವಂಥ ಶಕ್ತಿಯನ್ನು ತಾಯಿ ಚಾಮುಂಡೇಶ್ವರಿ ನಮ್ಮ ಸರ್ಕಾರ ಗಳಿಗೆ ನೀಡಲಿ, ಅಂತೆಯೇ ರಾಜ್ಯದ ಜನತೆಗೆ ಸುಖ, ಶಾಂತಿ, ಸಮೃದ್ಧಿಯನ್ನು ಚಾಮುಂಡೇಶ್ವರಿ ತಾಯಿ ನೀಡುವಂತಾಗಲಿ ಎಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಆರ್ ಎಸ್ ಎಸ್ ಎನ್ ಬ್ಯಾಂಕ್ ಅಧ್ಯಕ್ಷೆ ವಾಣಿಶ್ರೀ ವಿಶ್ವನಾಥ್, ಟ ಬಿಜೆಪಿ ಹಿರಿಯ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್.ಎನ್.ರಾಜಣ್ಣ, ಯಲಹಂಕ ನಗರ ಮಂಡಲ ಬಿಜೆಪಿ ಅಧ್ಯಕ್ಷ ಎಂ.ಸತೀಶ್, ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ನಗರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪವನ್ ಕುಮಾರ್, ಮುಖಂಡರಾದ ಎ.ಸಿ.ಮುನಿಕೃಷ್ಣಪ್ಪ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರಿದ್ದರು.

Public power

9845085793

9035282296

Leave a Reply

Your email address will not be published. Required fields are marked *