ಮಾನ್ಯರೇ,
ವಿಷಯ: ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹತಾ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.
ಉಲ್ಲೇಖ: ಪ್ರಕಟಣೆ ಸಂ:ಇಡಿ/ಕೆಇಎ/ಆಡಳಿತ/ಸಿಆರ್-03/2024(ಆರ್ಪಿಸಿ) ದಿ:3.4.2024
*
ಉಲ್ಲೇಖ-1ರನ್ವಯ ನಿರ್ವಾಹಕ (ದರ್ಜೆ-3, ಮೇಲ್ವಿಚಾರಕೇತರ) ಹುದ್ದೆಗೆ ಉಳಿಕೆ ಮೂಲ ವೃಂದದಡಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ದಿನಾಂಕ:01/09/2024 ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಗಳಲ್ಲಿ ಸರಾಸರಿ ಶೇ.30 ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಅಂಕಗಳ ಆಧಾರದ ಮೇಲೆ ಮೂಲದಾಖಲಾತಿಗಳ ಮತ್ತು ದೇಹದಾರ್ಢ್ಯತೆ ಪರಿಶೀಲನೆಗಾಗಿ ಅರ್ಹತಾ ಪಟ್ಟಿಯನ್ನು ಸಂಸ್ಥೆಯ ವೆಬ್ಸೈಟ್ www.mybmtc.karnataka.gov.in ನಲ್ಲಿ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ ಲಾಗಿನ್ ಆಗಿ, ಕರೆಪತ್ರವನ್ನು ಸಂಸ್ಥೆಯ ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಮುದ್ರಿಸಿಕೊಳ್ಳಲು ಮುಂಬರುವ ದಿನಗಳಲ್ಲಿ ಅವಕಾಶ ಕಲ್ಪಿಸಲಾಗುವುದು. ತತ್ಸಂಬಂಧ ಅಭ್ಯರ್ಥಿಗಳು ಕಾಲಕಾಲಕ್ಕೆ ಸಂಸ್ಥೆಯ ವೆಬ್ಸೈಟ್ ಅನ್ನು ಪರಿಶೀಲಿಸುವುದು.

ಅಲ್ಲದೇ, ಕರೆಪತ್ರದಲ್ಲಿ ಮೂಲ ದಾಖಲೆ ಮತ್ತು ದೇಹದಾರ್ಢ್ಯತೆ ಪರಿಶೀಲನೆಗೆ ನಿಗಧಿಪಡಿಸಿದ ಸ್ಥಳ, ದಿನಾಂಕ ಮತ್ತು ಸಮಯಕ್ಕೆ ಸರಿಯಾಗಿ ಅಭ್ಯರ್ಥಿಗಳು ಪೂರಕ ದಾಖಲಾತಿಗಳೊಂದಿಗೆ ಹಾಜರಾಗತಕ್ಕದ್ದು. ಈ ಸಂಬಂಧ ಯಾವುದೇ ಪತ್ರ ವ್ಯವಹಾರಗಳನ್ನು ಮಾಡಲಾಗುವುದಿಲ್ಲ.

ವಂದನೆಗಳೊಂದಿಗೆ,
ಸಹಿ/-
ಸಾರ್ವಜನಿಕ ಸಂಪರ್ಕಾಧಿಕಾರಿ
ಇವರಿಗೆ:
ಮಾಧ್ಯಮ ಸಂಪಾದಕರು,
ಈ ಮೇಲಿನ ಪತ್ರಿಕಾ ಪ್ರಕಟಣೆಯನ್ನು ತಮ್ಮ ದಿನಪತ್ರಿಕೆ/ದೃಷ್ಯ/ಎಫ್ಎಂರೇಡಿಯೊ/ಮುದ್ರಣ ಮಾಧ್ಯಮಗಳಲ್ಲಿ ಪ್ರಕಟಿಸಿ ಸಾರ್ವಜನಿಕ ಪ್ರಯಾಣಿಕರ ಗಮನಕ್ಕೆ ತರಲು ಕೋರಲಾಗಿದೆ.

Leave a Reply

Your email address will not be published. Required fields are marked *