ಬಂಗಾರಪೇಟೆ : ಜೀವನದಲ್ಲಿ ಉತ್ತಮ ಆಹಾರ ಪದ್ಧತಿ ಅಳವಡಿಸಿಕೊಳ್ಳುವುದರ ಜತೆಗೆ ದಿನನಿತ್ಯ ಒಂದಿಲ್ಲೊಂದು ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಡಾ ಕುಮಾರ್ ತೇಜ್ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲ್ಲೂಕಿನ ಕಾಮಸಮುದ್ರ ಹೋಬಳಿಯ ಮುಷ್ಟ್ರಹಳ್ಳಿ ಗ್ರಾಮದಲ್ಲಿ ಅಮ್ಮ ಆಸ್ಪತ್ರೆ ಕುಪ್ಪಂ ವತಿಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು ಅವರು ಪ್ರತಿದಿನ ಹೆಚ್ಚು ನಡೆದಾಡುವ ಅಭ್ಯಾಸ ರೂಢಿಸಿಕೊಳ್ಳುವುದರಿಂದ ಆರೋಗ್ಯ ಉತ್ತಮಪಡಿಸಿಕೊಳ್ಳಬಹುದು ಎಂದರು.

ಆರೋಗ್ಯವಾಗಿದ್ದರೆ, ಸುಖವಾಗಿ ಬಾಳಬಹುದು. ಇಲ್ಲವಾದರೆ ದುಡಿದ ಹಣವನ್ನು ಆಸ್ಪತ್ರೆಗೆ ಖರ್ಚುಮಾಡಬೇಕಾಗುತ್ತದೆ. ಆದ್ದರಿಂದ ರೋಗದ ಲಕ್ಷಣ ಕಾಣುವ ಮುನ್ನವೇ ಆಗ್ಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ ಸಲಹೆ ಪಾಲಿಸಬೇಕು ಎಂದು ತಿಳಿಸಿದರು.

ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ತಪಾಸಣೆಯನ್ನು ಮಾಡಿಕೊಳ್ಳುವ ಮೂಲಕ ಸದುಪಯೋಗ ಪಡೆದುಕೊಳ್ಳಬೇಕು,
ಆದರೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಬಿಪಿ, ಶುಗರ್‌, ಹೃದ್ರೋಗ ಹಾಗೂ ಕಿಡ್ನಿ ಕಾಯಿಲೆಗಳು ಸಾಮಾನ್ಯವಾಗಿವೆ. ಇವು ಶ್ರೀಮಂತಖಾಯಿಲೆಗಳಾಗಿದ್ದು, ಬಡಜನರು ಆರ್ಥಿಕವಾಗಿ ಭರಿಸಲು ಅಸಾಧ್ಯ. ಗ್ರಾಮೀಣ ಭಾಗದ ಹಾಗೂ ನಗರ ಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕವೇ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ. ನಾನು ಕೂಡ ಗ್ರಾಮೀಣ ಹಿನ್ನೆಲೆಯಿಂದ ಬಂದಿದ್ದೇನೆ. ಬಡತನದ ಪರಿಚಯವೂ ನನಗೆ ಇದ್ದು ಒಂದು ಉನ್ನತ ಸ್ಥಾನದ ಹೊಣೆ ಹೊಂದಿದ ಮೇಲೆ ಬಡ ಜನರ ಸೇವೆಯನ್ನು ಅವರ ಋಣವನ್ನು ಈ ರೀತಿಯ ಆರೋಗ್ಯ ಶಿಬಿರಗಳ ಮೂಲಕವೇ ತೀರಿಸಲು ಸಾಧ್ಯ ಎಂಬುದನ್ನು ಅರಿತಿದದೇನೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪಂಚಾಯಿತಿ ಅಧ್ಯಕ್ಷೆ ಮಂಜುಳ ಜಯಣ್ಣ ಮಾತನಾಡಿ, ಇಂತಹ ಆರೋಗ್ಯ ಶಿಬಿರ ಹಳ್ಳಿಗಳಲ್ಲಿ ಹೆಚ್ಚು ನಡೆಯಬೇಕು. ಇದರಿಂದ ಗ್ರಾಮಾಂತರ ಪ್ರದೇಶದ ಜನಸಾಮಾನ್ಯರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಸಾಧ್ಯ ಮತ್ತು ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಈ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ. ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಂಡು ಜೀವನ ಶೈಲಿಸಾಧ್ಯವಾದಷ್ಟು ಬದಲಾವಣೆ ಮಾಡಿಕೊಳ್ಳುವುದು ಉತ್ತಮ ಎಂದರು.

ಆರೋಗ್ಯ ಶಿಬಿರಗಳಿಂದ ಬಡವರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಇಂತಹ ಶಿಬಿರಗಳು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಆಯೋಜಿಸಬೇಕು ಎಂದು ತಿಳಿಸಿದರು.200ಕ್ಕೂ ಹೆಚ್ಚು ರೋಗಿಗಳ ಆರೋಗ್ಯ ತಪಾಸಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಅಹಿಂದ ಜಿಲ್ಲಾಧ್ಯಕ್ಷ ಎಸ್ ಕೆ ಜಯಣ್ಣ,ಗ್ರಾಮ ಪಂಚಾಯಿತಿಯ ಸದಸ್ಯರಾದ ಎಂ ವಿ ಸಂತೋಷ,ಎಂ ಟಿ ರಾಜಪ್ಪ,ಬಸಪ್ಪ,ಮುಖಂಡರಾದ ಮುನಿಯಪ್ಪ,ವೀರಭದ್ರಪ್ಪ,ನಾರಾಯಣಪ್ಪ, ಕೆ ಮುರುಗನ್ ,ವೆಂಕಟಾಚಲಪತಿ ಭಾಗವಹಿಸಿ

Leave a Reply

Your email address will not be published. Required fields are marked *