
ದಾರಿನಾಯಕನಪಾಳ್ಯದಲ್ಲಿ ನಾಲ್ಕು ಹೊಸ ಕಟ್ಟಡಕ್ಕೆ ಗುದ್ದಲಿ ಪೂಜೆ
ಗೌರಿಬಿದನೂರು: ತಾಲೂಕಿನ ದಾರಿನಾಯಕನಪಾಳ್ಯದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಾಲ್ಕು ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ಕೆ ಎಚ್ ಪುಟ್ಟಸ್ವಾಮಿ ಗೌಡರು ಗುದ್ದಲಿ ಪೂಜೆ ನೆರವೇರಿಸಿದರು.
ಸಮಗ್ರ ಶಿಕ್ಷಣ ಇಲಾಖೆಯ ಯೋಜನೆಯ ಅಡಿಯಲ್ಲಿ ಹೊಸ ನಾಲ್ಕು ಕಟ್ಟಡ ನಿರ್ಮಾಣ ಯೋಜನೆ ಅಡಿಯಲ್ಲಿ 70 ಲಕ್ಷ ರೂ. ವೆಚ್ಚದ ಕಟ್ಟಡ ಕಾಮಗಾರಿ ಹಾಗೂ ಶಾಲೆಯ ಹಳೆಯ ಕಟ್ಟಡಗಳ ದುರಸ್ತಿಗೆ 9 ಲಕ್ಷ ರೂ ವೆಚ್ಚದ ಕಾಮಗಾರಿಗೆ
ಚಾಲನೆ ನೀಡಿ ಅವರು ಮಾತನಾಡಿದರು.
ಸರಕಾರ ಶಿಕ್ಷ ಣ ಕ್ಷೇತ್ರಕ್ಕೆ ಪ್ರಾಶಸ್ತ್ಯ ನೀಡುತ್ತಿದ್ದು, ನೂತನ ಕಟ್ಟಡ ನಿರ್ಮಾಣದಿಂದ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿ ಈ ಶಾಲೆಗೆ ಅಗತ್ಯ ಸೌಲಭ್ಯಗಳನ್ನು ದೊರಕಿಸಿ ಕೊಡುವುದಾಗಿ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಪ್ರಾಂಶುಪಾಲರಾದ ಸತ್ಯೇಂದ್ರ ಕೃಷ್ಣಪ್ಪ,
ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಘು ಹನುಮಾನ್, ಶ್ರೀನಿವಾಸ ಗೌಡರು,
ಮಾಬು ಖಾನ್, ನಿವೃತ್ತ ಶಿಕ್ಷಕರಾದ ರಾಮಕೃಷ್ಣಪ್ಪ, ನರಸಿಂಹಮೂರ್ತಿ, ಡಿ. ನರಸಿಂಹಯ್ಯ, ಅಶ್ವತ್ಥ್ ರೆಡ್ಡಿ, ಯುವ ಮುಖಂಡ ಶರತ್ ಪಾಳೇಗಾರ , ಶಿವಶಂಕರ್ ರೆಡ್ಡಿ, ಗುತ್ತಿಗೆದಾರರಾದ ಶ್ರೀನಿವಾಸ, ಪಂಚಾಯಿತ್ ರಾಜ್ ಇಲಾಖೆಯ ಅಧಿಕಾರಿ ರಘುಮೂರ್ತಿ, ವೆಂಕಟರೋಣಪ್ಪ ಮುಂತಾದವರು ಉಪಸ್ಥಿತರಿದ್ದರು,
