ಬೀದರ್: ಶಾಹೀನ್ ಶಿಕ್ಷಣ ಸಂಸ್ಥೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಕನ್ನಡ ಮಾಧ್ಯಮದ 75 ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಪುನರಾವರ್ತಿತ ಉಚಿತ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ತಿಳಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ನೀಟ್‍ನಲ್ಲಿ 350ಕ್ಕೂ ಅಧಿಕ ಅಂಕ ಪಡೆದವರು ತರಬೇತಿಗೆ ಅರ್ಹರು ಎಂದು ಹೇಳಿದ್ದಾರೆ.
ಜುಲೈ 2 ರಂದು ಬೆಳಿಗ್ಗೆ 11.30ಕ್ಕೆ ನಗರದ ಶಹಾಪುರ ಗೇಟ್ ಸಮೀಪದ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಉಚಿತ ತರಬೇತಿಗೆ ವಿದ್ಯಾರ್ಥಿಗಳ ಆಯ್ಕೆ ಸಂದರ್ಶನ ನಡೆಯಲಿದೆ ಎಂದು ತಿಳಿಸಿದ್ದಾರೆ.
ಆಸಕ್ತ ವಿದ್ಯಾರ್ಥಿಗಳು ಇಲ್ಲಿ ಕ್ಲಿಕ್‌ ಮಾಡುವ ಮೂಲಕ ಲಿಂಕ್ ಬಳಸಿ ಸಂದರ್ಶನಕ್ಕೆ ಹೆಸರು ನೋಂದಾಯಿಸಬಹುದು ಎಂದು ಹೇಳಿದ್ದಾರೆ.
ಹೆಸರು ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ (9986792323) ಅಥವಾ ಗೌರವ ಕಾರ್ಯದರ್ಶಿ ಶಿವಶಂಕರ ಟೋಕರೆ (9341652131) ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇದನ್ನೂ ಓದಿ

ಬೊಂಗೊಧಾರಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಯಲಹಂಕದಲ್ಲಿ ವಿಜೃಂಭಣೆಯ ದುರ್ಗಾ ಪೂಜೆ 2026​ಯಲಹಂಕ ಸುದ್ದಿ:ಬೆಂಗಳೂರಿನ ಯಲಹಂಕದ ವೈಟ್ ಪರ್ಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ರೇವ ಕಾಲೇಜ್ ಮುಖ್ಯ ರಸ್ತೆ, ಬೆಳ್ಳಿಹಳ್ಳಿ ಕ್ರಾಸ್) ಬೊಂಗೋಧರ ಸಾಂಸ್ಕೃತಿಕ ಸಂಘದ (Bongodhara Cultural Association) ನೇತೃತ್ವದಲ್ಲಿ ದುರ್ಗಾಪೂಜೆ 2026 ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.​ಕಾರ್ಯಕ್ರಮದ ವಿಶೇಷತೆಗಳು:​ಈ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.​ಆಗಮಿಸಿದ ಭಕ್ತರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.​ವ್ಯಾಪಾರಸ್ಥರಿಗಾಗಿ ಪ್ರತ್ಯೇಕವಾಗಿ ಸ್ಟಾಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.​ಪ್ರತಿ ವರ್ಷದಂತೆ ಈ ಬಾರಿಯೂ ಈ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ಸಡಗರದಿಂದ ನಡೆಯುತ್ತಿದೆ.