
ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ನೂತನ ನಿರ್ದೇಶಕರ ಆಯ್ಕೆ :
ಯಲಹಂಕ : ಯಲಹಂಕ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಮುಂದಿನ ಐದು ವರ್ಷಗಳಿಗೆ ನಿರ್ದೇಶಕರ ಆಯ್ಕೆಗಾಗಿ ಸೋಮವಾರ ನಡೆದ ಚುನಾವಣೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಬಾಗಲೂರಿನ ಡಿ.ಜಗನ್ನಾಥ್, ಹುಣಸಮಾರನಹಳ್ಳಿಯ ಎನ್. ಉಷಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ನಿರ್ದೇಶಕರಾದ ಡಿ.ಜಗನ್ನಾಥ್ ಮತ್ತು ಎನ್.ಉಷಾ ಅವರಿಗೆ ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ಯಲಹಂಕ ತಾಲ್ಲೂಕು ಭೂ ನ್ಯಾಯ ಮಂಡಳಿ ಸದಸ್ಯರು, ಮಾಜಿ ತಾ.ಪಂ.ಅಧ್ಯಕ್ಷರಾದ ಮಾರೇನಹಳ್ಳಿ ನಾಗರಾಜ್, ಬಾಗಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಎ.ವೆಂಕಟರಾಜು, ಬಾಗಲೂರು ಗ್ರಾ.ಪಂ.ಅಧ್ಯಕ್ಷ ಎ.ಕೆಂಪೇಗೌಡ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಗೌರವಿಸಿ ಅಭಿನಂದಿಸಿದರು.