





7 ಕೋಟಿ ರು.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ :
ಯಲಹಂಕ : ಕ್ಷೇತ್ರದ ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ, ಚರಂಡಿ, ಹೆಚ್ಚುವರಿ ಕೊಠಡಿಗಳು, ಮೇಲ್ಛಾವಣಿ, ಸ್ಲ್ಯಾಬ್ ಗಳ ಅಳವಡಿಕೆ ಸೇರಿದಂತೆ 7 ಕೋಟಿ ರು.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್ ಆರ್ ವಿಶ್ವನಾಥ್ ಮಂಗಳವಾರ ಚಾಲನೆ ನೀಡಿದರು.
ನಂತರ ಅವರು ಮಾತನಾಡಿ ‘ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ತೀವ್ರತರವಾದ ರಾಜಕಾರಣ ಮಾಡುವುದುಂಟು, ಆದರೆ ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಎಲ್ಲಾ ಸದಸ್ಯರು ಒಗ್ಗಟ್ಟಾಗಿ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಪ್ರಗತಿಗಾಗಿ ಶ್ರಮಿಸುತ್ತಿರುವುದು ಸಂತೋಷದ ಸಂಗತಿ, ರಾಜ್ಯ ಸರ್ಕಾರದ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರ ಜೊತೆಗೆ ಸ್ಥಳೀಯವಾಗಿಯೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದು ಬಹಳ ಪ್ರಮುಖವಾಗಿರುತ್ತದೆ. ಈ ನಿಟ್ಟಿನಲ್ಲಿ ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರು ಯಾವುದೇ ಭಿನ್ನಾಭಿಪ್ರಾಯಗಳಿಗೆ ಎಡೆ ಮಾಡಿಕೊಡದೆ, ಒಗ್ಗಟ್ಟಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಶ್ಲಾಘನೀಯ ಸಂಗತಿ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಇಂದು ಸಿಂಗನಾಯಕನಹಳ್ಳಿ ಗ್ರಾಮ ಒಂದರಲ್ಲೇ ಏಳು ಕೋಟಿ ರು.ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಪಂಚಾಯಿತಿ ವ್ಯಾಪ್ತಿಯ ಉಳಿದ ಗ್ರಾಮಗಳಲ್ಲಿ ಸಹ ಇದೇ ರೀತಿಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ಎಸ್.ಎನ್.ರಾಜಣ್ಣ, ಡಿ.ಜಿ.ಅಪ್ಪಯ್ಯಣ್ಣ, ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ರಾಮಮೂರ್ತಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ, ಸಿಂಗನಾಯಕನಹಳ್ಳಿ ಗ್ರಾ.ಪಂ.ಅಧ್ಯಕ್ಷೆ ಅಮರಾವತಮ್ಮ, ಉಪಾಧ್ಯಕ್ಷ ಹೇಮಂತ್ ಕುಮಾರ್, ಮಾಜಿ ಅಧ್ಯಕ್ಷರಾದ ಚಂದ್ರಶೇಖರ್, ಟಿ.ಮುನಿರೆಡ್ಡಿ, ಮಾಜಿ ಉಪಾಧ್ಯಕ್ಷರಾದ ಎಸ್.ಜಿ.ಪ್ರಶಾಂತ್ ರೆಡ್ಡಿ, ಜೀವಿತಾ ಮುನಿಕೃಷ್ಣ, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ನರಸಿಂಹಮೂರ್ತಿ(ಎಸ್.ಟಿ.ಡಿ.ಮೂರ್ತಿ), ಗ್ರಾ.ಪಂ.ಸದಸ್ಯರಾದ, ಶಾಂತಲಾ ರಾಜಣ್ಣ, ಪದ್ಮಶ್ರೀ ನಾಗರಾಜ್ ರೆಡ್ಡಿ, ಸೌಭಾಗ್ಯ ಕಿರಣ್, ಮಲ್ಲೇಶ್, ಕೆ.ಬಾಬು, ಎಸ್.ಜಿ.ಮಂಜುನಾಥ್, ನಂಜೇಗೌಡ, ಹರೀಶ್, ಬಿಜೆಪಿ ಮುಖಂಡರಾದ ಜಿ.ಜೆ.ಮೂರ್ತಿ, ಎಚ್.ಸಿ.ರಾಜೇಶ್, ವಸಂತ್ ಅರಕೆರೆ, ಪಿ.ಕೆ.ರಾಜಣ್ಣ, ನಾಗೇಶ್, ಮುನಿಕೃಷ್ಣ, ರಾಜಶೇಖರ್ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿದ್ದರು.