
ಬೆಂಗಳೂರು ಡೈರಿ ನಿರ್ದೇಶಕರ ಚುನಾವಣಾ ಸ್ಪರ್ಧೆಗೆ ಅವಕಾಶ :
ಎಸ್ ಆರ್ ವಿಶ್ವನಾಥ್ ಅವರಿಗೆ ಅಭಿನಂದನೆ :
ಯಲಹಂಕ : ಮೇ ತಿಂಗಳಲ್ಲಿ ನಡೆಯಲಿರುವ ಬೆಂಗಳೂರು ಡೈರಿ ನಿರ್ದೇಶಕರ ಚುನಾವಣೆಯಲ್ಲಿ ಯಲಹಂಕ ತಾಲ್ಲೂಕಿನಿಂದ ಬಿಜೆಪಿ ಪಕ್ಷದ ಒಮ್ಮತದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸತೀಶ್ ಕಡತನಮಲೆ ಅವರಿಗೆ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಅವರನ್ನು ಅವರ ಗೃಹಕಚೇರಿಯಲ್ಲಿ ಸತೀಶ್ ಕಡತನಮಲೆ ಮತ್ತು ಕಡತನಮಲೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ಎಸ್ ಎನ್ ರಾಜಣ್ಣ, ದಿಬ್ಬೂರು ಜಯಣ್ಣ, ಚೊಕ್ಕನಹಳ್ಳಿ ವೆಂಕಟೇಶ್, ಡಿ.ಜಿ.ಅಪ್ಪಯ್ಯಣ್ಣ, ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ರಾಮಮೂರ್ತಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಿ.ಜೆ.ಮೂರ್ತಿ, ಹೆಸರಘಟ್ಟ ಹೋಬಳಿ ಬಿಜೆಪಿ ಉಪಾಧ್ಯಕ್ಷ ಇಟಗಲ್ ಪುರ ಮೋಹನ್, ಪ್ರಧಾನ ಕಾರ್ಯದರ್ಶಿ ಎಸ್.ಜಿ.ಪ್ರಶಾಂತ್ ರೆಡ್ಡಿ, ಬೆಂಗಳೂರು ಡೈರಿ ಮಾಜಿ ನಿರ್ದೇಶಕ ಮಾದಪ್ಪನಹಳ್ಳಿ ವಿಜಯಕುಮಾರ್, ಯಲಹಂಕ ಗ್ರಾ.ಮಂಡಲ ರೈತ ಮೋರ್ಚಾ ಅಧ್ಯಕ್ಷ ಎಚ್.ಸಿ.ರಾಜೇಶ್, ಅರಕೆರೆ ಗ್ರಾ.ಪಂ.ಮಾಜಿ ಅಧ್ಯಕ್ಷ ಕೆ.ಆರ್.ತಿಮ್ಮೇಗೌಡ, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಎಸ್.ಜಿ.ನರಸಿಂಹ ಮೂರ್ತಿ(ಎಸ್.ಟಿ.ಡಿ.ಮೂರ್ತಿ), ತಾ.ಪಂ.ಮಾಜಿ ಅಧ್ಯಕ್ಷ ಮುನಿದಾಸಪ್ಪ, ಯಲಹಂಕ ಗ್ರಾ.ಮಂಡಲ ಎಸ್ಸಿ ಮೋರ್ಚಾ ಅಧ್ಯಕ್ಷ ಬಿ.ಶ್ರೀನಿವಾಸಯ್ಯ, ಮಾಜಿ ಅಧ್ಯಕ್ಷ ಲಿಂಗನಹಳ್ಳಿ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಮುನಿರಾಜು, ಉಪಾಧ್ಯಕ್ಷ ಜಗದೀಶ್ ಸೇರಿದಂತೆ ಕ್ಷೇತ್ರದ ಹಲವು ಬಿಜೆಪಿ ಮುಖಂಡರು, ಕಡತನಮಲೆ ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರಿದ್ದರು.