

ದುಡಿಯೋಣ ಬಾ ಅಭಿಯಾನ ಮತ್ತು ಉದ್ಯೋಗ ಚೀಟಿ ವಿತರಣೆ : ಕಾರ್ಯನಿರ್ವಾಹಕ ಅಧಿಕಾರಿ ಹೊನ್ನಯ್ಯ ಜಿ.ಕೆ
ದುಡಿಯೋಣ ಬಾ ಅಭಿಯಾನ ಕಾರ್ಯಕ್ರಮ ಮತ್ತು ವಿಶೇಷ ಚೇತನರಿಗೆ ಉದ್ಯೋಗ ಚೀಟಿ ವಿತರಣೆ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿ ರವರ ಅಧ್ಯಕ್ಷತೆಯಲ್ಲಿ
ಮಂಚೇನಹಳ್ಳಿ ಗ್ರಾಮೀಣ ಪ್ರದೇಶದ ಜನರ ಜೀವನ ಮಟ್ಟ ಸುಧಾರಣೆಗೆ ಮತ್ತು ಅವರ ಕುಟುಂಬಕ್ಕೆ ಆರ್ಥಿಕವಾಗಿ ಶಕ್ತಿ ನೀಡಲು ಮನರೇಗಾ ಯೋಜನೆ ವಿಶೇಷ ರಿಯಾಯಿತು ಮತ್ತು ಸೌಲಭ್ಯ ಕಲ್ಪಿಸಲಾಗಿದೆ ಎಂದು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಹೊನ್ನಯ್ಯ ಜಿ.ಕೆ ರವರು ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ತಾಲ್ಲೂಕಿನ ಜರಬಂಡಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ದುಡಿಯೋಣ ಬಾ ಅಭಿಯಾನ ಕಾರ್ಯಕ್ರಮದಲ್ಲಿ
ಮ-ನರೇಗಾದಲ್ಲಿ ಶೇ.50ರಷ್ಟಿರುವ ಮಹಿಳಾ ಕೂಲಿಕಾರ್ಮಿಕರ ಸಂಖ್ಯೆಯನ್ನು ಶೇ.60ಕ್ಕೆ ಹೆಚ್ಚಿಸುವುದು ಅಭಿಯಾನದ ಉದ್ದೇಶವಾಗಿದೆ. ಮಾತ್ರವಲ್ಲದೆ, ಮೂರು ತಿಂಗಳು ಮಹಿಳಾ ಕೂಲಿಕಾರರಿಗೆ ನಿರಂತರ ಕೆಲಸ ಆದ್ಯತೆ ನೀಡುವುದು. ವೈಯಕ್ತಿಕ ಕಾಮಗಾರಿಗಳಾದ ಇಂಗು ಗುಂಡಿ, ವೈಯಕ್ತಿಕ ಶೌಚಾಲಯ, ಪೌಷ್ಟಿಕ ಕೈತೋಟ, ದನ ಮತ್ತು ಕುರಿ ಕಾಮಗಾರಿಗಳನ್ನು ನೀಡುವುದಾಗಿದೆ. ಮ-ನರೇಗಾ ಯೋಜನೆ ಮೂಲಕ ಮಹಿಳಾ ಸಬಲೀಕರಣ ಕೈಗೊಳ್ಳುವ ಬಹುಮುಖ್ಯ ಉದ್ದೇಶವಾಗಿದೆ.
ಮ-ನರೇಗಾದಡಿ ಮಹಿಳಾ ಕೂಲಿಕಾರರ ಪಾಲ್ಗೊಳ್ಳುವಿಕೆಯನ್ನು ಶೇ.60ಕ್ಕೆ ಹೆಚ್ಚಿಸುವ ಉದ್ದೇಶದಿಂದ “ದುಡಿಯೋಣ ಬಾ” ಅಭಿಯಾನ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಅಭಿಯಾನದಲ್ಲಿ ಭಾಗವಹಿಸಿ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು. ಅರ್ಹ ಮಹಿಳೆಯರು ಯೋಜನೆ ಸದುಪಯೋಗಪಡಿಸಿಕೊಳ್ಳುವ ಮೂಲಕ ಮಹಿಳಾ ಸಬಲೀಕರಣಕ್ಕೆ ಕೈ ಜೋಡಿಸಬೇಕು ಎಂದು ತಿಳಿಸಿದರು.
ನಂತರ ಮಾತನಾಡಿ ಒಂದು ಉದ್ಯೋಗ ಚೀಟಿಯಲ್ಲಿ ಜೀವಿತಾವಧಿಯಲ್ಲಿ 5 ಲಕ್ಷವರೆಗೆ ಪ್ರೋತ್ಸಾಹ ಹಣ ನೀಡಲಾಗುತ್ತಿದೆ ಗಂಡು ಹೆಣ್ಣಿಗೂ ಸಮಾನ ಕೂಲಿ ನೀಡಲಾಗುತ್ತಿದೆ ಪ್ರತಿ ವರ್ಷ 100 ದಿನ ಮಾನವ ದಿನಗಳ ಲೆಕ್ಕದಲ್ಲಿ ವರ್ಷಕ್ಕೆ ₹37 ಸಾವಿರ ಹಣ ನೀಡಲಾಗುತ್ತದೆ. ನರೇಗಾ ದುಡಿಯುವ ಕೈಗಳಿಗೆ ಕೆಲಸ ನೀಡುವ ಜತೆಗೆ ಗ್ರಾಮಾಭಿವೃದ್ಧಿಯ ಪರಿಕಲ್ಪನೆ ಹೊಂದಿಲಾಗಿದೆ ಎಂದು ತಿಳಿಸಿದರು.
ನಿಮ್ಮ ದುಡಿಮೆಗೆ ತಕ್ಕ ಕೂಲಿಯನ್ನು ನೀಡುವುದಲ್ಲದೇ ಕಾಮಗಾರಿಯ ವೆಚ್ಚವನ್ನು ಭರಿಸುವತ್ತ ಸಹಾಯಹಸ್ತ ಚಾಚುತ್ತದೆ ಎಂದರು. ಅಲ್ಲದೆ ಪಂಚತಂತ್ರ ಹಾಗೂ ಕುಡಿಯುವ ನೀರು ಮತ್ತು ಮನರೇಗಾ ಯೋಜನೆಯ ಸಮಸ್ಯಗೆ ಏಕಿಕೃತ ಸಹಾಯವಾಣಿ (8277506000) ಸಂಖ್ಯೆಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದು ಎಂದರು.
ಕಾರ್ಯನಿರ್ವಾಹಕ ಅಧಿಕಾರಿ ರವರು ವಿಶೇಷ ಚೇತನರಿಗೆ ಹೊಸ ಉದ್ಯೋಗ ಚೀಟಿಯನ್ನು ವಿತರಿಸಿದರು.
ನಂತರ ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ/ಕಾರ್ಯದರ್ಶಿ ರವರುಗಳು, ತಾಲ್ಲೂಕು ಐಇಸಿ ಸಂಯೋಜಕರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ನರೇಗಾ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.