







ಎಸ್ ಆರ್ ವಿಶ್ವನಾಥ್, ಬಿಜೆಪಿ ಮುಖಂಡರಿಂದ ಶುಭ ಹಾರೈಕೆ :
ಯಲಹಂಕ : ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎಚ್.ಸಿ.ರಾಜೇಶ್ ಅವರ ಜನ್ಮದಿನದ ಪ್ರಯುಕ್ತ ಅವರ ಸ್ವಗ್ರಾಮ ಹುರುಳಿಚಿಕ್ಕನಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರು ಎಚ್.ಸಿ.ರಾಜೇಶ್ ಅವರಿಗೆ ಗೌರವ ಸನ್ಮಾನ ನೀಡಿ, ಜನ್ಮದಿನದ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್ ಎನ್ ರಾಜಣ್ಣ, ಡಿ.ಜಿ.ಅಪ್ಪಯ್ಯಣ್ಣ, ಚೊಕ್ಕನಹಳ್ಳಿ ವೆಂಕಟೇಶ್, ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ರಾಮಮೂರ್ತಿ, ಪ್ರಧಾನ ಕಾರ್ಯದರ್ಶಿ ಅದ್ದೆವಿಶ್ವನಾಥಪುರ ಮಂಜುನಾಥ್, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಜಿ.ಜೆ.ಮೂರ್ತಿ, ಹೆಸರಘಟ್ಟ ಹೋಬಳಿ ಬಿಜೆಪಿ ಅಧ್ಯಕ್ಷ ವಸಂತ್ ಅರಕೆರೆ, ಪ್ರಧಾನ ಕಾರ್ಯದರ್ಶಿ ಎಸ್.ಜಿ.ಪ್ರಶಾಂತ್ ರೆಡ್ಡಿ, ಉಪಾಧ್ಯಕ್ಷ ಪಿ.ಕೆ.ರಾಜಣ್ಣ, ಯಲಹಂಕ ಗ್ರಾ.ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅನಿಲ್ ಬೈರಾಪುರ, ಯುವ ಮೋರ್ಚಾ ಕಾರ್ಯದರ್ಶಿ ರಾಜೇಂದ್ರ ಬೈರಾಪುರ,ಬಿಜೆಪಿ ಮುಖಂಡರಾದ ಟಿ.ಮುನಿರೆಡ್ಡಿ, ಎಚ್.ಡಿ.ಕೃಷ್ಣಪ್ಪ, ಬ್ಯಾತ ಸುರೇಶ್, ಕಿರಣ್, ಮೈಲಪ್ಪನಹಳ್ಳಿ ಹರೀಶ್, ವೆಂಕಟೇಶ್, ಕೆ.ಬಾಬು, ಸಾಸಿವೆಘಟ್ಟ ಹನುಮೇಗೌಡ, ಹುರುಳಿಚಿಕ್ಕನಹಳ್ಳಿ ಮಂಜೇಶ್ ಎಚ್.ಬಿ., ಗಿರೀಶ್, ಪರಮೇಶ್ ಸೇರಿದಂತೆ ಅಪಾರ ಸಂಖ್ಯೆಯ ಬಿಜೆಪಿ ಕಾರ್ಯಕರ್ತರಿದ್ದರು.