






ಗ್ರಾ.ಪಂ.ನೂತನ ಅಧ್ಯಕ್ಷರು, ಉಪಾಧ್ಯಕ್ಷರನ್ನು ಅಭಿನಂದಿಸಿದ
ಶಾಸಕ ಎಸ್ ಆರ್ ವಿಶ್ವನಾಥ್ :
ಯಲಹಂಕ : ಕ್ಷೇತ್ರದ ರಾಜಾನುಕುಂಟೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರು, ಉಪಾಧ್ಯಕ್ಷರಾಗಿ ಬುಧವಾರ ಅವಿರೋಧವಾಗಿ ಆಯ್ಕೆಯಾದ ಸುಜಾತಮ್ಮ ಮತ್ತು ಸೌಮ್ಯ ಗೋವಿಂದರಾಜು ಅವರನ್ನು ಶಾಸಕ ಎಸ್.ಆರ್.ವಿಶ್ವನಾಥ್ ಅವರು ಸಿಂಗನಾಯಕನಹಳ್ಳಿಯಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ಆರ್ ಎಸ್ ಎಸ್ ಎನ್ ಬ್ಯಾಂಕ್ ಅಧ್ಯಕ್ಷರಾದ ಡಾ.ವಾಣಿಶ್ರೀ ವಿಶ್ವನಾಥ್, ಬಿಜೆಪಿ ಯುವ ಮುಖಂಡರು, ವಿಶ್ವವಾಣಿ ಫೌಂಡೇಶನ್ ನ ಕಾರ್ಯದರ್ಶಿ ಅಲೋಕ್ ವಿಶ್ವನಾಥ್, ಹಿರಿಯ ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್.ಎನ್.ರಾಜಣ್ಣ, ಡಿ.ಜಿ.ಅಪ್ಪಯ್ಯಣ್ಣ, ಚೊಕ್ಕನಹಳ್ಳಿ ವೆಂಕಟೇಶ್, ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿಶ್ವನಾಥಪುರ ಮಂಜುನಾಥ್, ಮುಖಂಡರಾದ ವರುಣ್, ಅಶೋಕ್, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಎಸ್.ಜಿ.ನರಸಿಂಹಮೂರ್ತಿ (ಎಸ್.ಟಿ.ಡಿ.ಮೂರ್ತಿ), ವೀರಣ್ಣ ರಿಗ್ಲೆ, ಅಂಬಿಕಾ ರಾಜೇಂದ್ರ, ಭವಾನಿ ಶ್ರೀನಿವಾಸ್, ಹೆಸರಘಟ್ಟ ಹೋಬಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಪ್ರಶಾಂತ್ ರೆಡ್ಡಿ, ಚನ್ನಮ್ಮ, ಗ್ರಾ.ಪಂ.ಸದಸ್ಯರಾದ ಶಿವಕುಮಾರ್, ವೆಂಕಟೇಶ್, ಆರ್.ಡಿ.ರಾಜಣ್ಣ, ಎಂ.ಚಿಕ್ಕಣ್ಣ, ಆರ್.ಎಂ.ನಾಗಭೂಷಣ್, ಮುತ್ತು ವೇಣು, ರಾಜು ಕೆ., ಹೇಮಲತಾ ಡಿ.ಬಿ., ಗಂಗಮ್ಮ, ಸುಜಾತ, ಮಂಜುಳ, ಬಾಲಾಜಿ ಆರ್.ವಿ., ಸಿಂಗನಾಯಕನಹಳ್ಳಿ ಗ್ರಾ.ಪಂ.ಸದಸ್ಯ ಕೆ.ಬಾಬು, ಬಿಜೆಪಿ ಯುವ ಮುಖಂಡ ಸಾದೇನಹಳ್ಳಿ ಪ್ರಕಾಶ್ ಗೌಡ ಸೇರಿದಂತೆ ಇನ್ನಿತರರಿದ್ದರು.