



























ಹಲವು ಗಣ್ಯರಿಂದ ಶುಭ ಹಾರೈಕೆ :
ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ಪ್ರಮುಖ ಬಿಜೆಪಿ ಮುಖಂಡರು, ಕ.ವಿ.ಕಾ.ನಿಗಮದ ಮಾಜಿ ಅಧ್ಯಕ್ಷರು, ಬಿಜೆಪಿ ರಾಜ್ಯ ಕಾರ್ಯದರ್ಶಿ ಎಚ್.ಸಿ.ತಮ್ಮೇಶ್ ಗೌಡ ಅವರ ಜನ್ಮದಿನಾಚರಣೆ ಯನ್ನು ವಿವಿಧ ಸೇವಾ ಕಾರ್ಯಗಳ ಮೂಲಕ ವಿಜೃಂಭಣೆ ಮತ್ತು ಅರ್ಥಪೂರ್ಣ ರೀತಿಯಲ್ಲಿ ಆಚರಿಸಲಾಯಿತು.
ಬ್ಯಾಟರಾಯನಪುರ ಕ್ಷೇತ್ರದ ನೂರಾರು ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ, ಮಹಿಳೆಯರಿಗೆ ಸೀರೆ ವಿತರಣೆ, ತಿಂಡ್ಲು ಗ್ರಾಮದಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜನೆ ಸೇರಿದಂತೆ ವಿವಿಧ ಸೇವಾ ಕಾರ್ಯಗಳ ಮೂಲಕ ಜನ್ಮದಿನದ ಆಚರಣೆಗೆ ವಿಶೇಷತೆಯ ಮೆರಗು ನೀಡಲಾಯಿತು.
ಜನ್ಮದಿನದ ಪ್ರಯುಕ್ತ ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಹಿರಿಯ ಬಿಜೆಪಿ ಮುಖಂಡರಾದ ತಿಂಡ್ಲು ರಾಜಗೋಪಾಲ್, ಮುನಿರಾಜು, ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ದೊಡ್ಡಜಾಲ ಹನುಮಂತು ಗೌಡ, ಬ್ಯಾಟರಾಯನಪುರ ನಗರ ಮಂಡಲ ಬಿಜೆಪಿ ಅಧ್ಯಕ್ಷ ಕೃಷ್ಣಮೂರ್ತಿ, ನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಲೋಹಿತ್ ಗೌಡ, ಗ್ರಾಮಾಂತರ ಮಂಡಲ ಯುವ ಮೋರ್ಚಾ ಅಧ್ಯಕ್ಷ ತಿಮ್ಮೇಗೌಡ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ದೀಪಕ್, ಬ್ಯಾಟರಾಯನಪುರ ನಗರ ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಮುನಿಸ್ವಾಮಿ ಒಡೆಯರ್ (ಆನಂದ್ ಮಾಸ್ಟರ್), ಬೋವಿ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ರವಿ, ಬೆಟ್ಟಹಲಸೂರು ಗ್ರಾ.ಪಂ.ಮಾಜಿ ಅಧ್ಯಕ್ಷ ಬಿ.ಎಸ್.ಅನಿಲ್ ಕುಮಾರ್, ಕೋಗಿಲು ವಾರ್ಡ್ ಬಿಜೆಪಿ ಅಧ್ಯಕ್ಷ ಕಟ್ಟಿಗೇನಹಳ್ಳಿ ಅನಿಲ್ ಕುಮಾರ್, ಅಗ್ರಹಾರ ಸಮಾಜಸೇವಕರಾದ ನರಸಿಂಹಮೂರ್ತಿ. ಮಂಜುನಾಥ್ ಸೇರಿದಂತೆ ಕ್ಷೇತ್ರದ ವಿವಿಧ ವಾರ್ಡ್ ಗಳ ಬಿಜೆಪಿ ಅಧ್ಯಕ್ಷರು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ಮೋರ್ಚಾ ಮುಖಂಡರು ಸೇರಿದಂತೆ ಹಲವು ಬಿಜೆಪಿ ಮುಖಂಡರು, ಅಸಂಖ್ಯಾತ ಕಾರ್ಯಕರ್ತರು, ತಮ್ಮೇಶ್ ಗೌಡ ಅವರ ಅಭಿಮಾನಿಗಳಿದ್ದು, ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ, ತಮ್ಮೇಶ್ ಗೌಡ ಅವರಿಗೆ ಸನ್ಮಾನಿಸಿ ಜನ್ಮದಿನದ ಶುಭ ಹಾರೈಸಿದರು.