












ವಿವಿಧ ಸೇವಾ ಕಾರ್ಯಗಳ ಮೂಲಕ ಹೇಮಾವತಿ ನಾಗರಾಜ್ ಬಾಬು ಅವರ ಜನ್ಮದಿನ ಆಚರಣೆ :
ಬ್ಯಾಟರಾಯನಪುರ : ಕ್ಷೇತ್ರದ ಬೆಟ್ಟಹಲಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹೇಮಾವತಿ ನಾಗರಾಜ್ ಬಾಬು ಅವರು ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳಿಗೆ ಅನ್ನದಾನದ ನೆರವು, ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ ಸೇರಿದಂತೆ ವಿವಿಧ ಸೇವಾ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ತಮ್ಮ ಜನ್ಮ ದಿನಾಚರಣೆಯನ್ನು ವಿಜೃಂಭಣೆ ಮತ್ತು ಅರ್ಥಪೂರ್ಣ ರೀತಿಯಲ್ಲಿ ಆಚರಿಸಿಕೊಂಡರು.
ಜನ್ಮದಿನದ ಪ್ರಯುಕ್ತ ಬುಧವಾರ ಸಂಜೆ ಕುದುರಗೆರೆ ಸಮೀಪದ ಖಾಸಗಿ ರೆಸಾರ್ಟ್ ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು, ಮುಖಂಡರು, ಹಿತೈಷಿಗಳು, ಸ್ನೇಹಿತರು, ಬಂಧುಬಾಂಧವರು ಹಾಗೂ ಗ್ರಾಮಸ್ಥರು ಪಾಲ್ಗೊಂಡು ಕೇಕ್ ಕತ್ತರಿಸಿ, ಗೌರವ ಸನ್ಮಾನ ನೀಡಿ ಹೇಮಾವತಿ ನಾಗರಾಜ್ ಬಾಬು ಅವರಿಗೆ ಜನ್ಮದಿನದ ಶುಭ ಹಾರೈಸಿದರು.
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ
R ಹನುಮಂತು
7349337989