ಯಲಹಂಕ ಕ್ಷೇತ್ರ ಜೆಡಿಎಸ್ ಮುಖಂಡರು, ಕಾರ್ಯಕರ್ತರ ಸಭೆ :
ಯಲಹಂಕ : ವಿಧಾನ ಪರಿಷತ್ ಮಾಜಿ ಸದಸ್ಯರು, ಹಿರಿಯ ಜೆಡಿಎಸ್ ಮುಖಂಡ ಇ.ಕೃಷ್ಣಪ್ಪ(ಮುಂಗಾರು ಮಳೆ) ಅವರ ನೇತೃತ್ವದಲ್ಲಿ, ಯಲಹಂಕ ಕ್ಷೇತ್ರ ಜೆಡಿಎಸ್ ಅಧ್ಯಕ್ಷ ವೇಣುಗೋಪಾಲ್ ಅವರ ಅಧ್ಯಕ್ಷತೆಯಲ್ಲಿ ಯಲಹಂಕ ಉಪನಗರದಲ್ಲಿ ಭಾನುವಾರ ನಡೆದ ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಸಂಘಟನೆ, ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಣೆ, ಚುನಾವಣಾ ಸ್ಪರ್ಧೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.
ಕಾರ್ಯಕ್ರಮದಲ್ಲಿ ಯಲಹಂಕ ಕ್ಷೇತ್ರ ಜೆಡಿಎಸ್ ಮಾಜಿ ಅಧ್ಯಕ್ಷರಾದ ಎನ್.ಕೃಷ್ಣಪ್ಪ, ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಕವಿತಾ ರೆಡ್ಡಿ, ಜೆಡಿಎಸ್ ಸೇವಾದಳದ ರಾಜ್ಯಾಧ್ಯಕ್ಷ ಬಸವರಾಜ ಪಾದಯಾತ್ರಿ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಕ್ಷೇತ್ರ ಮಹಾಪ್ರಧಾನ ಕಾರ್ಯದರ್ಶಿ ಗಂಗಲಿಂಗಯ್ಯ, ಬೆಂ.ಉತ್ತರ ಲೋಕಸಭಾ ಕ್ಷೇತ್ರ ಪ್ರವೀಣ್, ಬಿಬಿಎಂಪಿ ಘಟಕದ ಅಧ್ಯಕ್ಷ ಗೋಪಿ, ಯುವ ಜನತಾ ದಳದ ಅಧ್ಯಕ್ಷ ಕಿರಣ್ ಕುಮಾರ್, ಯಲಹಂಕ ಹೋಬಳಿ ಅಧ್ಯಕ್ಷ ರಾಮಗೊಂಡನಹಳ್ಳಿ ಸುರೇಶ್, ಹೆಸರಘಟ್ಟ ಹೋಬಳಿ ಅಧ್ಯಕ್ಷ ಕೆ.ಬಿ.ಮಹದೇವಯ್ಯ, ಕಾರ್ಯಾಧ್ಯಕ್ಷ ರಾಜಣ್ಣ, ಮಹಿಳಾ ಘಟಕದ ಕ್ಷೇತ್ರಾಧ್ಯಕ್ಷೆ ಶ್ರೀಲತಾ, ಎಸ್ ಸಿ ಘಟಕದ ಅಧ್ಯಕ್ಷ ಜಗದೀಶ್, ಕ್ಷೇತ್ರ ಸೇವಾದಳ ಅಧ್ಯಕ್ಷ ಕಿರಣ್, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಗೋಪಾಲ್, ಕ್ಷೇತ್ರ ಘಟಕದ ಅಧ್ಯಕ್ಷ ವೀರರಾಜೇ ಅರಸ್ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳಿದ್ದರು.

Leave a Reply

Your email address will not be published. Required fields are marked *