ಶೈಕ್ಷಣಿಕ ಪ್ರೋತ್ಸಾಹಕ್ಕಾಗಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ, ಸಮವಸ್ತ್ರ ವಿತರಣೆ :

ಶಾಸಕ ವಿಶ್ವನಾಥ್ ಜನ್ಮದಿನದ ಪ್ರಯುಕ್ತ ‘ವಿಶ್ವವಾಣಿ’ ಫೌಂಡೇಶನ್ ವತಿಯಿಂದ ವಿತರಣೆ :

ಯಲಹಂಕ : ವಿಶ್ವವಾಣಿ ಫೌಂಡೇಶನ್ ಮತ್ತು ಸಿಂಗನಾಯಕನಹಳ್ಳಿ ಗ್ರಾ.ಪಂ.ಸಹಯೋಗದೊಂದಿಗೆ ಸಿಂಗನಾಯಕನಹಳ್ಳಿ ಗ್ರಾಮದ ಪುನೀತ್ ರಾಜ್‍ಕುಮಾರ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಜನ್ಮದಿನದ ಪ್ರಯುಕ್ತ, ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಪ್ರೋತ್ಸಾಹಕ್ಕಾಗಿ ಸಿಂಗನಾಯಕನಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ, ಸಮವಸ್ತ್ರ, ಬ್ಯಾಗ್ ಸೇರಿದಂತೆ ವಿವಿಧ ಪರಿಕರಗಳನ್ನು ವಿಶ್ವವಾಣಿ ಫೌಂಡೇಶನ್ ಕಾರ್ಯದರ್ಶಿ ಅಲೋಕ್ ವಿಶ್ವನಾಥ್ ವಿತರಿಸಿದರು.

ನಂತರ ಮಾತನಾಡಿದ ಅವರು ‘ಶಾಸಕರಾದ ಎಸ್ ಆರ್ ವಿಶ್ವನಾಥ್ ಅವರ ಜನ್ಮದಿನದ ಪ್ರಯುಕ್ತ ಇಂದು ಸಿಂಗನಾಯಕನಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಎಲ್ಲಾ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ, ಸಮವಸ್ತ್ರ ಮತ್ತು ಬ್ಯಾಗ್ ಗಳನ್ನು ವಿತರಿಶಲಾಗಿದೆ. ವಿಶ್ವವಾಣಿ ಫೌಂಡೇಶನ್ ಸ್ಥಾಪನೆಗೊಂಡ ದಿನದಿಂದಲೂ ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಉನ್ನತಿ ಮತ್ತು ಪ್ರೋತ್ಸಹಕ್ಕಾಗಿ ಉಚಿತ ನೋಟ್ ಪುಸ್ತಕ, ಸಮವಸ್ತ್ರ, ಬ್ಯಾಗ್, ಶೂ ಸೇರಿದಂತೆ ಶೈಕ್ಷಣಿಕ ಅಗತ್ಯತೆಯ ಸಾಧನ, ಸಲಕರಣೆಗಳನ್ನು ವಿತರಿಸುತ್ತಾ ಬಂದಿದ್ದು, ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಒಂದಿಷ್ಟು ಸಹಕಾರ, ಪ್ರೋತ್ಸಾಹ ದೊರೆಯಬೇಕೆಂಬ ಸದುದ್ದೇಶದಿಂದ ವಿತರಿಸುತ್ತಾ ಬರಲಾಗುತ್ತಿದೆ. ಶಾಸಕರ ಜನ್ಮದಿನದಂದೇ ವಿತರಿಸುವ ಯೋಜನೆಯಿತ್ತು ಆದರೆ ಅಂದು ಹಲವು ಸವಲತ್ತುಗಳನ್ನು ವಿತರಿಸುವ ಕಾರ್ಯಕ್ರಮ ಇದ್ದಿದ್ದರಿಂದ ಇಂದು ವಿತರಿಸಲಾಗುತ್ತಿದೆ. ಇಂದು ನೋಟ್ ಪುಸ್ತಕ, ಸಮವಸ್ತ್ರ ಮತ್ತು ಬ್ಯಾಗ್ ಪಡೆದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು, ಶೈಕ್ಷಣಿಕವಾಗಿ ಅತ್ಯುನ್ನತ ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸಿಂಗನಾಯಕನಹಳ್ಳಿ ಗ್ರಾ.ಪಂ.ಅಧ್ಯಕ್ಷೆ ಅಮರಾವತಮ್ಮ, ಉಪಾಧ್ಯಕ್ಷ ಜಿ.ಸಿ.ಮಂಜುನಾಥ್, ಮಾಜಿ ಅಧ್ಯಕ್ಷ ಟಿ.ಮುನಿರೆಡ್ಡಿ, ಮಾಜಿ ಉಪಾಧ್ಯಕ್ಷರಾದ ಎಸ್.ಜಿ.ಪ್ರಶಾಂತ್ ರೆಡ್ಡಿ, ಜೀವಿತಾ ಮುನಿಕೃಷ್ಣ, ಗ್ರಾ.ಪಂ. ಸದಸ್ಯರಾದ ಪದ್ಮಶ್ರೀ ನಾಗರಾಜ್ ರೆಡ್ಡಿ, ಸುನಂದಮ್ಮ, ಕೆ.ಬಾಬು, ಮಲ್ಲೇಶ್ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿದ್ದರು.

Leave a Reply

Your email address will not be published. Required fields are marked *