ಕೋಲಾರ :- ತಾಲೂಕಿನ ನರಸಾಪುರ ಹೋಬಳಿಗೆ ಸೇರಿದ ಚೌಡದೇನಹಳ್ಳಿ ಗ್ರಾಮದ ಬಳಿ ಇರುವ ವಿದ್ಯಾ ಬೋಧಿನಿ ಇಂಟಿಗ್ರೇಟೆಡ್ ಪಬ್ಲಿಕ್ ಶಾಲೆಯ ಮಕ್ಕಳು 2023 24 ನೇ ಸಾಲಿನ ನರಸಾಪುರ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ, ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ಪಡೆದಿದ್ದಾರೆ.

ಅಥ್ಲೆಟಿಕ್ಸ್ ವಿಭಾಗದಲ್ಲಿ ಪ್ರಥಮ 6, ದ್ವಿತೀಯ 3, ತೃತೀಯ 7, ಬಹುಮಾನವನ್ನು ಮತ್ತು ಗುಂಪು ಆಟದ ಹಿರಿಯ ಪ್ರಾಥಮಿಕ ವಿಭಾಗದ ಬಾಲಕಿಯರು ಥ್ರೋ ಬಾಲ್ ನಲ್ಲಿ ಪ್ರಥಮ ಸ್ಥಾನ, ಬಾಲಕರ ವಾಲಿ ಬಾಲ್ ನಲ್ಲಿ ದ್ವಿತೀಯ ಸ್ಥಾನ, ಪ್ರೌಢಶಾಲಾ ವಿಭಾಗದ ಬಾಲಕಿಯರು ಥ್ರೋ ಬಾಲ್ ನಲ್ಲಿ ದ್ವಿತೀಯ ಸ್ಥಾನ ಪಡೆದು, ಶಾಲೆಗೆ ಒಟ್ಟು 47 ಬಹುಮಾನಗಳನ್ನು ಪಡೆದಿರುತ್ತಾರೆ.

ಈ ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲರಾದ ನಂದಕುಮಾರ್ ಹಾಗೂ ಮುಖ್ಯ ಶಿಕ್ಷಕಿ ಆನಾ ಜನಿಫರ್ ಅಭಿನಂದಿಸಿದ್ದು , ವಿದ್ಯಾರ್ಥಿಗಳಿಗೆ ಸಹಕರಿಸಿದ ದೈಹಿಕ ಶಿಕ್ಷಕರಾದ ಆಂಜಿನಪ್ಪ ಮತ್ತು ಶ್ರೀದೇವಿಯನ್ನು ಶಾಲಾ ಆಡಳಿತ ಮಂಡಳಿ ಅಭಿನಂದಿಸಿರುತ್ತಾರೆ.

ಕ್ರೀಡಾಕೂಟಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

Leave a Reply

Your email address will not be published. Required fields are marked *