



















7 ಕೋಟಿ ರು.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್ ಆರ್ ವಿಶ್ವನಾಥ್ ಚಾಲನೆ :
ಗುಣಮಟ್ಟದ ಕಾಮಗಾರಿ ನಿರ್ವಹಣೆಗೆ ಅಧಿಕಾರಿಗಳು, ಗುತ್ತಿಗೆದಾರರಿಗೆ ಸೂಚನೆ :
ಯಲಹಂಕ : ಯಲಹಂಕ ಕ್ಷೇತ್ರದ ದಾಸನಪುರ ಹೋಬಳಿಯ ಆಲೂರು ಗ್ರಾಮ ಪಂಚಾಯತಿ ಮತ್ತು ಮಾದನಾಯಕನಹಳ್ಳಿ ನಗರ ಸಭೆ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ರಸ್ತೆ, ಚರಂಡಿ, ಅಂಗನವಾಡಿ ಕೇಂದ್ರ, ಸ್ತ್ರೀ ಶಕ್ತಿ ಭವನ, ರಾಜಕಾಲುವೆ ಅಭಿವೃದ್ಧಿ ಸೇರಿದಂತೆ 7 ಕೋಟಿ ರು. ಅಂದಾಜು ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್ ಆರ್ ವಿಶ್ವನಾಥ್ ಗುರುವಾರ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ‘ಕ್ಷೇತ್ರದ ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯ ನಿಟ್ಟಿನಲ್ಲಿ ಸುಮಾರು 7 ಕೋಟಿ ರು.ಅಂದಾಜು ವೆಚ್ಚದ ವಿವಿಧ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಾಗಿದ್ದು, ಈ ಪೈಕಿ ಆಲೂರು ಗ್ರಾ.ಪಂ.ವ್ಯಾಪ್ತಿಯ ಆಲೂರು ಗ್ರಾಮದಲ್ಲಿ ರಸ್ತೆ, ಚರಂಡಿ ಮತ್ತು ಸ್ತ್ರೀ ಶಕ್ತಿ ಭವನ ನಿರ್ಮಾಣ ಕಾಮಗಾರಿ, ಕುದುರಗೆರೆ, ಕುದುರಗೆರೆ ಕಾಲೋನಿ, ಅಂಚೆಪಾಳ್ಯ, ಚಿಕ್ಕಬಿದರಕಲ್ಲು ಮತ್ತು ತಮ್ಮೇನಹಳ್ಳಿ ಪಾಳ್ಯ ಗ್ರಾಮಗಳಲ್ಲಿ ರಸ್ತೆ, ಚರಂಡಿ ಕಾಮಗಾರಿ, ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ ರಾಜಕಾಲುವೆ ಅಭಿವೃದ್ಧಿ ಕಾಮಗಾರಿ ಸೇರಿ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಮಾದನಾಯಕನಹಳ್ಳಿ ನಗರಸಭೆ ವ್ಯಾಪ್ತಿಯ ಹನುಮಂತನಗರ ಮತ್ತು ಬಸವೇಶ್ವರ ವೃತ್ತದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿ, ಮಾದನಾಯಖನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ಮತ್ತು ಸ್ತ್ರೀ ಶಕ್ತಿ ಭವನ ಉದ್ಘಾಟನೆ ನೆರವೇರಿಸಲಾಗಿದ್ದು, ಈ ಎಲ್ಲಾ ಕಾಮಗಾರಿಗಳ ನಿರ್ವಹಣಾ ವೆಚ್ಚ ಸುಮಾರು 7 ಕೋಟಿ ರು.ಗಳಾಗಿದೆ. ಸರ್ಕಾರದ ಅನುದನಾದ ಕೊರತೆಯ ನಡುವೆಯೂ ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಟಿತವಾಗಬಾರದು ಎಂಬ ಮನೋಭಿಲಾಷೆಯೊಂದಿಗೆ ಪರಿಶ್ರಮಪಟ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಕಾಮಗಾರಿ ನಿರ್ವಹಣೆಯಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಗುಣಮಟ್ಟ ಕಾಯ್ದುಕೊಳ್ಳುವುದರ ಜೊತೆಗೆ ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಎಂ.ಜಿ.ರಾಮಮೂರ್ತಿ, ಪ್ರಧಾನ ಕಾರ್ಯದರ್ಶಿಗಳಾದ ಸೋಮಶೇಖರ್, ವಿಶ್ವನಾಥಪುರ ಮಂಜುನಾಥ್, ಮಾಜಿ ಜಿ.ಪಂ.ಸದಸ್ಯರಾದ ಕೊಳ್ಳಿಗಾನಹಳ್ಳಿ ವೆಂಕಟೇಶ್, ಡಾ.ಉದ್ದಂಡಯ್ಯ, ಚೊಕ್ಕನಹಳ್ಳಿ ವೆಂಕಟೇಶ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಿ.ಜೆ.ಮೂರ್ತಿ, ಆಲೂರು ಗ್ರಾ.ಪಂ.ಅಧ್ಯಕ್ಷೆ ಪದ್ಮಾವತಿ ಮಂಜುನಾಥ್, ಯಲಹಂಕ ಗ್ರಾ.ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಆಕಾಶ್ ಗೌಡ, ಎಸ್.ಸಿ.ಮೋರ್ಚಾ ಅಧ್ಯಕ್ಷ ಬಿ.ಶ್ರೀನಿವಾಸಯ್ಯ, ಬಿಜೆಪಿ ಮುಖಂಡರಾದ ಸಂಪತ್ ಕುಮಾರ್, ಹನುಮಂತೇಗೌಡನ ಪಾಳ್ಯ ವೆಂಕಟೇಶ್, ಕುದುರಗೆರೆ ಮಂಜುನಾಥ್, ತಮ್ಮೇನಹಳ್ಳಿ ಜಯರಾಮ್, ಮಹಿಳಾ ಮೋರ್ಚಾ ಮುಖಂಡರಾದ ಶಶಿಕಲಾ, ವಸಂತಕುಮಾರಿ, ಮಂಗಳ, ಪ್ರೇಮ ಸೇರಿದಂತೆ ಇನ್ನಿತರರಿದ್ದರು.