ಮುದ್ದೇಬಿಹಾಳ ತಾಲೂಕಾ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಅಧ್ಯಕ್ಷ ಮುತ್ತು ಚಲವಾದಿ (ನೇಬಗೇರಿ)
ಮುದ್ದೇಬಿಹಾಳ: ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜಿನ ಅವಶ್ಯಕತೆ ತುಂಬಾ ಇದೆ, ಆದರೆ ಸರ್ಕಾರ ಜಿಲ್ಲೆಯಲ್ಲಿ ಪಿಪಿಪಿ (ಪಬ್ಲಿಕ್, ಪ್ರೈವೇಟ್, ಪಾರ್ಟನರಶಿಪ್) ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸುವ ಹುನ್ನಾರದಲ್ಲಿದೆ ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ತಾಲೂಕಾ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಅಧ್ಯಕ್ಷ ಮುತ್ತು ಚಲವಾದಿ (ನೇಬಗೇರಿ) ಹೇಳಿದ್ದಾರೆ.
ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್ ಸ್ಥಾಪನೆ ಆಗಬೇಕೆಂದು ಹಲವಾರು ವಿದ್ಯಾರ್ಥಿ ಸಂಘಟನೆಗಳು ಕಳೆದ ೧೫ ವರ್ಷಗಳಿಂದ ಹೋರಾಟಗಳನ್ನು ನಡೆಸುತ್ತಿವೆ ಇದರ ಫಲವಾಗಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರ್ಕಾರ ನಿರ್ಧರಿಸಿದ್ದು ಸ್ವಾಗತಾರ್ಹ ಆದರೆ ಪಿಪಿಪಿ ಮಾದರಿಯನ್ನು ಕೈಬಿಟ್ಟು ಸಂಪೂರ್ಣ ಸರ್ಕಾರಿ ಮಾದರಿಯ ವೈದ್ಯಕೀಯ ಕಾಲೇಜನ್ನು ಸ್ಥಾಪನೆ ಮಾಡಬೇಕು. ಶಿಕ್ಷಣ ಹಾಗೂ ಆರೋಗ್ಯ ಸೇವಾ ವಲಯದಲ್ಲಿ ಇರಬೇಕಾಗಿತ್ತು ಆದರೆ ಖಾಸಗೀಕರಣದ ಮೂಲಕ ಎರಡು ಕ್ಷೇತ್ರಗಳನ್ನು ಮಾರಾಟಮಾಡುತ್ತಿರುವುದು ಖಂಡನೀಯ. ಜಿಲ್ಲೆಯಲ್ಲಿ ಈಗಾಗಲೇ ಖಾಸಗಿ ಮೆಡಿಕಲ್ ಕಾಲೇಜುಗಳಿದ್ದು ಇದಕ್ಕೆ ಲಕ್ಷಾಂತರ ಶುಲ್ಕ ಕಟ್ಟಲು ಸಾಧ್ಯವಾಗದೆ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ‘ತೊ

Leave a Reply

Your email address will not be published. Required fields are marked *