


ಮಕ್ಕಳ ಭವಿಷ್ಯದಲ್ಲಿ ಶಿಕ್ಷಕರ ಪಾತ್ರ ಅತ್ಯಮೂಲ್ಯ
ಯಲಹಂಕ ಸುದ್ದಿ. ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವವಾದದ್ದು ಹಾಗೂ ಜವಾಬ್ದಾರಿಯುತವಾದದ್ದು ಎಂದು, ಕೋಗಿಲಿನ ಆಕ್ಸ್ಫರ್ಡ್ ಶಾಲೆಯ ಮುಖ್ಯ ಶಿಕ್ಷಕರಾದ ಪ್ರಮೀಳಾ ರಾಜೇಶ್ ಅವರು ಹೇಳಿದರು.
ಸೆಪ್ಟೆಂಬರ್ 8 .9.2025ರಂದು ಸೋಮವಾರ ಯಲಹಂಕದ ಕೋಗಿಲಿನ ಆಕ್ಸ್ಫರ್ಡ್ ಶಾಲೆಯಲ್ಲಿ ಆಚರಿಸಲಾದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ಮಾಡುವ ಹಾಗೂ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಗಮನಾರ್ಹ ಆದ್ದರಿಂದ
ಶಿಕ್ಷಕರಿಗೆ ಸಹಕರಿಸಬೇಕಾದದ್ದು ಪೋಷಕರ ಕರ್ತವ್ಯವಾಗಿದೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ಮನರಂಜನೆ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು ಹಾಗೂ
ಶಿಕ್ಷಕರಿಗಾಗಿ ಅನೇಕ ಆಟಗಳನ್ನು ಏರ್ಪಡಿಸಲಾಗಿತ್ತು. ಆಟಗಳಲ್ಲಿ ವಿಜೇತರದ ಶಿಕ್ಷಕರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಕ್ಲಸ್ಟರ್ ಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪದಕ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ದ್ವಿತೀಯ ಪಿಯುಸಿಯ ಮದನ್ ಹಾಗೂ ರೋಷನ್ ಕಾರ್ಯಕ್ರಮ ನಿರೂಪಣೆ ಮಾಡಿದರೆ, ದ್ವೀತಿಯ puc ವಿದ್ಯಾರ್ಥಿ ಸಾರ ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತಿಸಿದರು. 10ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ saad ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು. ವಂದನಾರ್ಪಣೆಯನ್ನು 10ನೇ ತರಗತಿ ವಿದ್ಯಾರ್ಥಿ ಅಂಕಿತ B ಮಾಡಿದರು.
ಕಾರ್ಯಕ್ರಮದಲ್ಲಿ ಶ್ರೀಮತಿ ಶೋಭರಾಜ್ ಹಾಗೂ ಅನೇಕ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು
