ಸಿಂಗನಾಯಕನಹಳ್ಳಿ ಗ್ರಾ.ಪಂ.ಉಪಾಧ್ಯಕ್ಷರ ಪದಗ್ರಹಣ :
ಯಲಹಂಕ : ಕ್ಷೇತ್ರದ ಸಿಂಗನಾಯಕನಹಳ್ಳಿ ಗ್ರಾ.ಪಂ.ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ದಿಬ್ಬೂರು ಗ್ರಾಮದ ಸುನಂದ ಬಿ.ಎನ್.ಪ್ರಕಾಶ್ ಅವರು ಶಾಸಕ ಎಸ್ ಆರ್ ವಿಶ್ವನಾಥ್ ಅವರ ಸಮ್ಮುಖದಲ್ಲಿ ಸೋಮವಾರ ತಮ್ಮ ಉಪಾಧ್ಯಕ್ಷ ಸ್ಥಾನದ ಪದಗ್ರಹಣ ಮಾಡಿದರು.
ಈ ವೇಳೆ ಶಾಸಕ ಎಸ್ ಆರ್ ವಿಶ್ವನಾಥ್ ಅವರು ಮಾತನಾಡಿ ‘ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯಿತಿ ಒಂದು ಪ್ರತಿಷ್ಟಿತ ಗ್ರಾಮ ಪಂಚಾಯಿತಿಯಾಗಿದ್ದು, ಗ್ರಾ.ಪಂ‌.ಉಪಾಧ್ಯಕ್ಷರಾಗಿ ಸುನಂದ ಬಿ.ಎನ್.ಪ್ರಕಾಶ್ ಅವರು ಅವಿರೋಧವಾಗಿ ಆಯ್ಕೆಯಾಗಿರುವುದು ಸಂತೋಷದ ಸಂಗತಿ, ಪದಗ್ರಹಣ ಕಾರ್ಯಕ್ರಮದ ಈ ಶುಭ ಸಂದರ್ಭದಲ್ಲಿ ಅವರಿಗೆ ಅಭಿನಂದನೆಗಳು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಯ ಆಶೋತ್ತರಗಳಿಗೆ ಸದಾ ಸ್ಪಂದಿಸುವ ಮೂಲಕ ಸಹಕರಿಸುವುದಾಗಿ ಭರವಸೆ ನೀಡಿದರು.
ನೂತನ ಉಪಾಧ್ಯಕ್ಷೆ ಸುನಂದ ಬಿ.ಎನ್.ಪ್ರಕಾಶ್ ಅವರು ಮಾತನಾಡಿ ‘ಉಪಾಧ್ಯಕ್ಷರಾಗಿ ಆಯ್ಕೆಯಾಗಲು ತಮ್ಮ ಬೆಂಬಲ ನೀಡಿ ಸಹಕರಿಸಿರುವ ಶಾಸಕ ಎಸ್ ಆರ್ ವಿಶ್ವನಾಥ್ ಅವರು ಮತ್ತು ಸಿಂಗನಾಯಕನಹಳ್ಳಿ ಗ್ರಾ.ಪಂ.ಸರ್ವ ಸದಸ್ಯರಿಗೆ ಈ ಶುಭ ಸಂದರ್ಭದಲ್ಲಿ ಕೃತಜ್ಞತಾ ಪೂರ್ವಕ ಧನ್ಯವಾದ ತಿಳಿಸಲಿಚ್ಛಸುತ್ತೇನೆ. ಎಸ್ ಆರ್ ವಿಶ್ವನಾಥ್ ಅವರ ಸಲಹೆ, ಮಾರ್ಗದರ್ಶನದಲ್ಲಿ, ಸರ್ವ ಸದಸ್ಯರ ವಿಶ್ವಾಸದೊಂದಿಗೆ ಗ್ರಾ.ಪಂ.ವ್ಯಾಪ್ತಿಯ ಗ್ರಾಮಗಳ ಸರ್ವಾಂಗೀಣ ಪ್ರಗತಿ ಪ್ರಗತಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.
ನೂತನ ಉಪಾಧ್ಯಕ್ಷರನ್ನು ಗ್ರಾ.ಪಂ.ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಹಲವು ಮುಖಂಡರು ಸನ್ಮಾನಿಸಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್.ಎನ್.ರಾಜಣ್ಣ, ಚೊಕ್ಕನಹಳ್ಳಿ ವೆಂಕಟೇಶ್, ಡಾ.ಉದ್ದಂಡಯ್ಯ, ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿಶ್ವನಾಥಪುರ ಮಂಜುನಾಥ್, ಗ್ರಾ.ಪಂ.ಅಧ್ಯಕ್ಷೆ ಅಮರಾವತಮ್ಮ, ಮಾಜಿ ಅಧ್ಯಕ್ಷ ಟಿ.ಮುನಿರೆಡ್ಡಿ, ಮಾಜಿ ಉಪಾಧ್ಯಕ್ಷರಾದ ಎಸ್.ಜಿ.ಪ್ರಶಾತರೆಡ್ಡಿ, ಹೇಮಂತ್ ಕುಮಾರ್, ಜಿ.ಸಿ.ಮಂಜುನಾಥ್, ಜೀವಿತ ಮುನಿಕೃಷ್ಣ, ಗ್ರಾ.ಪಂ.ಸದಸ್ಯರಾದ ಪದ್ಮಶ್ರೀ ನಾಗರಾಜ್ ರೆಡ್ಡಿ, ಶಾಂತಲಾ ರಾಜಣ್ಣ, ಭಾಗ್ಯಲಕ್ಷ್ಮಿ ಕಿರಣ್ ಕುಮಾರ್, ಸುಧಾರಾಣಿ, ವೀಣಾ ಆರ್., ಶೋಭಾ ಗೋಪಾಲ್, ಚೈತ್ರ ಕೆಂಪೇಗೌಡ, ಶೋಭಾ, ಮುನಿರತ್ನಮ್ಮ, ನಂಜೇಗೌಡ ಟಿ., ಕೆ.ಬಾಬು, ಮಲ್ಲೇಶ್, ಹರೀಶ್, ಮುನಿಯಪ್ಪ ಆರ್., ರವಿಚಂದ್ರ, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಎಸ್.ಜಿ.ನರಸಿಂಹಮೂರ್ತಿ (ಎಸ್.ಟಿ.ಡಿ.ಮೂರ್ತಿ), ಅರಕೆರೆ ಗ್ರಾ.ಪಂ.ಮಾಜಿ ಅಧ್ಯಕ್ಷ ಕೆ.ಆರ್.ತಿಮ್ಮೇಗೌಡ ಸೇರಿದಂತೆ ಇನ್ನಿತರರಿದ್ದರು.

Leave a Reply

Your email address will not be published. Required fields are marked *