ಬೆಂಗಳೂರು ಉತ್ತರ ನಗರ ಪಾಲಿಕೆ
ಬೆಂಗಳೂರು, ಸೆ.29:
ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಹಮ್ಮಿಕೊಂಡ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಕಾರ್ಯ 2025ರ ತರಬೇತಿ ಕಾರ್ಯಗಾರದ ಕುರಿತು:
ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಪೊಮ್ಮಲ ಸುನೀಲ್ ಕುಮಾರ್ ರವರ ನೇತೃತ್ವದಲ್ಲಿ ಈ ಕೆಳಕಂಡ ಸ್ಥಳಗಳಲ್ಲಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಕಾರ್ಯ 2025ರ ಸಂಬಂಧ ಗಣತಿದಾರರಿಗೆ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು.
ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಹಾಗೂ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜು.
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿ.ಇ.ಎಲ್ ಹೈಸ್ಕೂಲ್.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸೌಂದರ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಸೈನ್ಸ್.
ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಅರ್ಷಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ.
ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಬಿಎಂಪಿ ಮಹಿಳಾ‌‌ ಪದವಿ ಪೂರ್ವ ಕಾಲೇಜು .
ಸರ್ವಜ್ಞ‌ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನ್ಯೂ ಬಾಲ್ಡ್ವಿನ್ ಇಂಟರ್ನ್ಯಾಷನಲ್ ಶಾಲೆ .
ಈ ಕಾರ್ಯಗಾರದಲ್ಲಿ ಒಟ್ಟು 2704 ಗಣತಿದಾರ ಪೈಕಿ 2100 ಗಣತಿದಾರರು ಹಾಜರಿದ್ದು, ಉಳಿದ 604 ಗಣತಿದಾರರು ಗೈರು ಹಾಜರಾಗಿರುತ್ತಾರೆ.
ಉತ್ತರ ಹಾಗೂ ಪಶ್ಚಿಮ ನಗರ ಪಾಲಿಕೆಗಳ ಗಡಿಭಾಗಗಳಿಗೆ ಆಯುಕ್ತರವರ ಭೇಟಿ
ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರಾದ ಶ್ರೀ. ಪೊಮ್ಮಲ ಸುನೀಲ್ ಕುಮಾರ್ ರವರು ಇಂದು ಬೆಳಿಗ್ಗೆ ಉತ್ತರ ಮತ್ತು ಪಶ್ಚಿಮ ನಗರ ಪಾಲಿಕೆಗಳ ಗಡಿ ಭಾಗಗಳಿಗೆ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲಿಸಿದರು.
ತದನಂತರ ಹೊರ ವರ್ತುಲ ರಸ್ತೆ (ಗೋರಗುಂಟೆಪಾಳ್ಯ ದಿಂದ ಹೆಬ್ಬಾಳ ಜಂಕ್ಷನ್‌ ವರೆಗೆ) ಪರಿಶೀಲನೆ ನಡೆಸಿ, ಅಲ್ಲಿ ಕಂಡುಬಂದ ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಇದಲ್ಲದೆ, ಭದ್ರಪ್ಪ ಲೇಔಟ್ ಕೆಳಸೇತುವೆಯ ಬಳಿ ಕಂಡುಬಂದ ಬ್ಲ್ಯಾಕ್ ಸ್ಪಾಟ್ ಅನ್ನು ಕೂಡಲೇ ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಜಂಟಿ ಆಯುಕ್ತರಾದ ಮೊಹಮ್ಮದ್ ನಯೀಮ್ ಮೊಮಿನ್, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇತರೆ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದರು.
ತ್ವರಿತಗತಿಯಲ್ಲಿ ಸಾಗುತ್ತಿರುವ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ:
ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ರವರ ನಿರ್ದೇಶನದಂತೆ ಗುಂಡಿಗಳನ್ನು ಮುಚ್ಚುವ ಕಾರ್ಯವು ತ್ವರಿತಗತಿಯಲ್ಲಿ ಸಾಗುತ್ತಿದ್ದು, ಒಟ್ಟು ಗುರುತಿಸಲಾದ 2301 ಗುಂಡಿಗಳಲ್ಲಿ ಈಗಾಗಲೇ 1387 ಗುಂಡಿಗಳನ್ನು ಮುಚ್ಚಲಾಗಿದ್ದು, ಉಳಿದ 914 ಗುಂಡಿಗಳನ್ನು ಮುಚ್ಚಬೇಕಾಗಿರುತ್ತದೆ.
ಈ ಸಂಬಂಧ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಗುಣಮಟ್ಟ ಕಾಪಾಡಿಕೊಂಡು ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಮುಂದಿನ 5 ದಿನಗಳ ಒಳಗಾಗಿ ಕಡ್ಡಾಯವಾಗಿ ಪೂರ್ಣಗೊಳಿಸಬೇಕೆಂದು ಆಯುಕ್ತರು ಸೂಚನೆ ನೀಡಿರುತ್ತಾರೆ.

Leave a Reply

Your email address will not be published. Required fields are marked *