
















ಮುಖಂಡರು, ಸ್ನೇಹಿತರು, ಹಿತೈಷಿಗಳು, ಅಭಿಮಾನಿಗಳಿಂದ ಶುಭ ಹಾರೈಕೆ :
ಯಲಹಂಕ : ಕನ್ನಡ ಚಿತ್ರರಂಗದ ಖ್ಯಾತ ಖಳನಟ, ಸ್ನೇಹಜೀವಿ ಶೋಭರಾಜ್ ಅವರ ಜನ್ಮದಿನದ ಪ್ರಯುಕ್ತ ರಾಜಾನುಕುಂಟೆ ಯಲ್ಲಿರುವ ಅವರ ಸ್ವಗೃಹದಲ್ಲಿ ಆಯೋಜಿಸಿದ್ದ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಯಲಹಂಕ ಕ್ಷೇತ್ರದ ಹಲವು ಬಿಜೆಪಿ ಮುಖಂಡರು, ಶೋಭರಾಜ್ ಅವರ ಸ್ನೇಹಿತರು, ಹಿತೈಷಿಗಳು, ಅಭಿಮಾನಿಗಳು ಸೇರಿದಂತೆ ಹಲವರು ಶೋಭರಾಜ್ ಅವರಿಗೆ ಗೌರವ ಸನ್ಮಾನ ನೀಡಿ, ಕೇಕ್ ಕತ್ತರಿಸಿ ಜನ್ಮದಿನದ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡರಾದ ದಿಬ್ಬೂರು ಜಯಣ್ಣ, ಡಿ.ಜಿ.ಅಪ್ಪಯ್ಯಣ್ಣ, ಚೊಕ್ಕನಹಳ್ಳಿ ವೆಂಕಟೇಶ್, ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿಶ್ವನಾಥಪುರ ಮಂಜುನಾಥ್, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಎಸ್.ಜಿ.ನರಸಿಂಹಮೂರ್ತಿ(ಎಸ್.ಟಿ.ಡಿ.ಮೂರ್ತಿ), ವೀರಣ್ಣ(ರಿಗ್ಲೆ), ಹೆಸರಘಟ್ಟ ಹೋಬಳಿ ಬಿಜೆಪಿ ಅಧ್ಯಕ್ಷ ವಸಂತ್ ಅರಕೆರೆ, ಪ್ರಧಾನ ಕಾರ್ಯದರ್ಶಿ ಎಸ್.ಜಿ.ಪ್ರಶಾಂತ್ ರೆಡ್ಡಿ, ಉಪಾಧ್ಯಕ್ಷ ಇಟಗಲ್ ಪುರ ಮೋಹನ್, ಶಿವಾನಂದ್, ಗ್ರಾ.ಪಂ.ಸದಸ್ಯರಾದ ಆರ್.ಡಿ.ರಾಜಣ್ಣ, ರಘು, ವೆಂಕಟೇಶ್, ಬಿಜೆಪಿ ಯುವ ಮುಖಂಡರಾದ ನವೀನ್(ತಂಬಿ), ಸಾದೇನಹಳ್ಳಿ ಪ್ರಕಾಶ್ ಗೌಡ ಸೇರಿದಂತೆ ಇನ್ನಿತರರಿದ್ದರು.
ಸುದ್ದಿ ಹಾಗೂ ಜಾಹಿರಾತುಗಾಗಿ ಸಂಪರ್ಕಿಸಿ
R Hanumanthau kogilu layout Yelahanka Bangalore
9845085793
7349337989
