








ಮಾರೇನಹಳ್ಳಿ ಗ್ರಾ.ಪಂ.ನೂತನ ಅಧ್ಯಕ್ಷರಾಗಿ ಸಂಧ್ಯಾ ಸುಂದರೇಶ್ ಅವಿರೋಧ ಆಯ್ಕೆ :
ಬ್ಯಾಟರಾಯನಪುರ : ಕ್ಷೇತ್ರದ ಜಾಲ ಹೋಬಳಿ ಮಾರೇನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಮಾರೇನಹಳ್ಳಿ ಗ್ರಾಮದ ಸಂಧ್ಯಾ ಸುಂದರೇಶ್ ಅವಿರೋಧವಾಗಿ ಆಯ್ಜೆಯಾಗಿದ್ದಾರೆ.
ಮಾರೇನಹಳ್ಳಿ ಗ್ರಾ.ಪಂ.ಯಲ್ಲಿ ಒಟ್ಟು 21 ಜನ ಸದಸ್ಯರಿದ್ದು, ಅಧ್ಯಕ್ಷರಾಗಿದ್ದ ಪಿ.ರಾಹುಲ್ ಅವರಿಂದ ತೆರವಾದ ಸ್ಥಾನಕ್ಕಾಗಿ ಶುಕ್ರವಾರ ನಡೆದ ಅಧ್ಯಕ್ಷರ ಆಯ್ಕೆ ಚುನಾವಣಾ ಪ್ರಕ್ರಿಯೆಯಲ್ಲಿ ಪ್ರತಿಸ್ಪರ್ಧಿ ಯಾರೂ ಇಲ್ಲದ ಕಾರಣ ಅವಿರೋಧವಾಗಿ ಆಯ್ಕೆಯಾದರು.
ನಂತರ ಮಾತನಾಡಿದ ಅವರು ‘ಸಾಮಾನ್ಯ ಸ್ಥಾನಕ್ಕೆ ಮೀಸಲಿದ್ದ ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗದ ಮಹಿಳೆಗೆ ಅವಕಾಶ ಕಲ್ಪಸಿಕೊಡುವ ಮೂಲಕ ಸಹಕರಿಸಿರುವ ಸಚಿವ ಕೃಷ್ಣಬೈರೇಗೌಡ ಅವರಿಗೆ ಕೃತಜ್ಞತೆ ತಿಳಿಸಲಿಚ್ಛಿಸುತ್ತೇನೆ. ಲಭ್ಯವಿರುವ ಅವಧಿಯಲ್ಲಿ ಎಲ್ಲಾ ಸದಸ್ಯರ ವಿಶ್ವಾಸದೊಂದಿಗೆ ಗ್ರಾ.ಪಂ.ವ್ಯಾಪ್ತಿಯ ಗ್ರಾಮಗಳ ಪ್ರಗತಿಗೆ ಶ್ರಮಿಸುವುದಾಗಿ ತಿಳಿಸಿದರು.
ನೂತನ ಅಧ್ಯಕ್ಷರನ್ನು ಹಲವು ಮುಖಂಡರು, ಗ್ರಾಮಸ್ಥರು ಸನ್ಮಾನಿಸಿ ಅಭಿನಂದಿಸಿದರು.
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ
R Hanumanthau kogilu layout
Yelahanka Bangalore Karnataka
9845085793. 8050671579
7349337989
