






















ಯಲಹಂಕ ಸುದ್ದಿ ಬ್ಯಾಟರಾಯನಪುರ : ಪ್ರತಿ ಬೂತ್ ಮಟ್ಡದಲ್ಲಿ ಬಿಜೆಪಿ ಬಲವರ್ಧನೆ ಮಾಡುವ ಸಂಕಲ್ಪವನ್ನು ಬಿಜೆಪಿ ಮುಖಂಡರು, ಕಾರ್ಯಕರ್ತರು ಮಾಡಬೇಕು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಎಚ್.ಸಿ.ತಮ್ಮೇಶ್ ಗೌಡ ಕರೆ ನೀಡಿದರು.
ಬ್ಯಾಟರಾಯನಪುರ ಕ್ಷೇತ್ರದ ಸಂಪಿಗೆಹಳ್ಳಿ ವಾರ್ಡ್ ವ್ಯಾಪ್ತಿಯ ಚೊಕ್ಕನಹಳ್ಳಿಯಲ್ಲಿ ಗುರುವಾರ ಸಂಜೆ ‘ವಿಜಯ ಸಂಕಲ್ಪ’ ಶೀರ್ಷಿಕೆಯ ಅಡಿಯಲ್ಲಿ ಆಯೋಜಿಸಿದ್ದ ಪಕ್ಷದ ಪ್ರಮುಖರ ಸಭೆ ಮತ್ತು ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಪ್ರತಿ ಬೂತ್ ಗೆದ್ದರೆ ಇಡೀ ದೇಶವನ್ನೇ ಗೆಲ್ಲಬಹುದು ಎಂಬ ನರೇಂದ್ರ ಮೋದಿಯವರ ಮಾತನ್ನು ಬಿಜೆಪಿ ಪಕ್ಷದ ಪ್ರತಿ ಕಾರ್ಯಕರ್ತರು ಪಾಲಿಸಿದ್ದೇ ಆದಲ್ಲಿ ಮುಂಬರುವ ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬ್ಯಾಟರಾಯನಪುರ ಕ್ಷೇತ್ರದ ಎಲ್ಲಾ 14 ವಾರ್ಡ್ ಗಳನ್ನು ಸುಲಭವಾಗಿ ಗೆಲ್ಲಬಹುದು. ರಾಜ್ಯ ಸರ್ಕಾರದ ಜನವಿರೋಧಿ ಆಡಳಿತ, ಅಭಿವೃದ್ಧಿ ಶೂನ್ಯ ಕಾರ್ಯವೈಖರಿಗೆ ಜನತೆ ಬೇಸತ್ತಿದ್ದು ಎಷ್ಟು ಬೇಗ ಈ ಸರ್ಕಾರ ತೊಲಗುತ್ತದೆಯೋ ಎಂದು ಹಿಡಿಶಾಪ ಹಾಕುತ್ತಿದ್ದಾರೆ. ರಸ್ತೆ ಗುಂಡಿ ಮುಚ್ ಲಾಗದ ಸರ್ಕಾರದಿಂದ ಯಾವ ಅಭಿವೃದ್ಧಿಯನ್ನು ನಿರೀಕ್ಷಿಸಲಾಗದು. ಬಿಬಿಎಂಪಿ ಚುನಾವಣೆ ಘೋಷಣೆಯ ಹೊಸ್ತಿಲಲ್ಲಿರುವ ಈ ವೇಳೆಯಲ್ಲಿ ಪ್ರತಿ ಬಿಜೆಪಿ ಕಾರ್ಯಕರ್ತರು ಸರ್ಕಾರದ ವೈಫಲ್ಯತೆ, ದುರಾಡಳಿತದಂತಹ ನ್ಯೂನ್ಯತೆಗಳನ್ನು ನಿಮ್ಮ ಬೂತ್ ನ ಪ್ರತಿ ಮತದಾರರಿಗೆ ತಿಳಿಸುವ ಮೂಲಕ ಅರಿವು ಮೂಡಿಸಬೇಕು. ಬ್ಯಾಟರಾಯನಪುರ ಕ್ಷೇತ್ರದ ಪ್ರತಿ ವಾರ್ಡ್ ನಲ್ಲೂ ಬಿಜೆಪಿ ಪಕ್ಷಕ್ಕೆ ಸುಭದ್ರವಾದ ನೆಲೆಯಿದೆ, ಕಾರ್ಯಕರ್ತರು ಅದನ್ನು ಇನ್ನೂ ಹೆಚ್ಚು ಭದ್ರಪಡಿಸುವ ಕಾರ್ಯವನ್ನು ಕಾಳಜಿಯಿಂದ ಮಾಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಬ್ಯಾಟರಾಯನಪುರ ಕ್ಷೇತ್ರದ ಅಗ್ರಹಾರ ಬಡಾವಣೆಯ ಹಿರಿಯ ಮುಖಂಡ ಎನ್ ನರಸಿಂಹಮೂರ್ತಿ ಅಗ್ರಹಾರ ಅವರು ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾದರು.
ಇದೇ ಸಂದರ್ಭದಲ್ಲಿ ಬ್ಯಾಟರಾಯನಪುರ ನಗರ ಮಂಡಲ ಬಿಜೆಪಿ ಅಧ್ಯಕ್ಷ ಕೃಷ್ಣಮೂರ್ತಿ, ಗ್ರಾಮಾಂತರ ಮಂಡಲ ಅಧ್ಯಕ್ಷ ಹನುಮಂತಗೌಡ, ಸಂಪಿಗೆಹಳ್ಳಿ ವಾರ್ಡ್ ಬಿಜೆಪಿ ನೂತನ ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ಬಿಜೆಪಿ ಮುಖಂಡರಾದ ಪುಟ್ಟರಾಜು, ಮುನಿಸ್ವಾಮಿ ಒಡೆಯರ್ (ಆನಂದ ಮಾಸ್ಟರ್ )ನರಸಿಂಹಮೂರ್ತಿ ರವರ ಬೆಂಬಲಿಗರಾದ ಮುನಿಸ್ವಾಮಿ ಬನ್ನು ಮಾಮ್ M ಬಾಲಮುರುಗನ್ ವೆಂಕಟೇಶ್ ಇನ್ನಿತರು ಸೇರಿದಂತೆ ಹಲವು ಮುಖಂಡರಿದ್ದರು.
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ
R Hanumanthau kogilu layout
Yelahanka Bangalore Karnataka
9845085793. 8050671579
7349337989
