ಹುಬ್ಬಳ್ಳಿ :- ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸ್ಟಡಿ ಸರ್ಕಲ್ ಯೋಜನೆಯಡಿ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ಆಗಸ್ಟ್ 18 ರಿಂದ 30 ವರೆಗೆ (ಸಾರ್ವತ್ರಿಕ ರಜಾ ದಿನಗಳನ್ನು ಹೊರತು ಪಡಿಸಿ) ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಹುಬ್ಬಳ್ಳಿಯಲ್ಲಿ ತಮ್ಮ ಹೆಸರನ್ನು ಆಗಸ್ಟ್ 18 ರೊಳಗೆ ನೋಂದಾಯಿಸಿಕೊಳ್ಳಬೇಕು. ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕುವೆಂಪು ರಸ್ತೆ, ನವನಗರ, ಹುಬ್ಬಳ್ಳಿ ಹಾಗೂ ದೂರವಾಣಿ ಸಂಖ್ಯೆ 0836-2225288, 9113922949, 9480869880, 8197440155 ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಫ್.ಡಿ.ಎ ಹಾಗೂ ಎಸ್.ಡಿ.ಎ ನೇಮಕಾತಿ ಉಚಿತ ಪರೀಕ್ಷಾ ಪೂರ್ವ ತರಬೇತಿ