1.5 ಕೋಟಿ ರು.ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ :
ಯಲಹಂಕ :ಯಲಹಂಕ ಕ್ಷೇತ್ರದ ಸಿಂಗನಾಯಕನಹಳ್ಳಿ, ದಿಬ್ಬೂರು, ಶ್ಯಾನುಭೋಗನಹಳ್ಳಿ, ಮುತ್ತುಗದಹಳ್ಳಿ ಮತ್ತು ಶ್ಯಾನುಭೋಗನಹಳ್ಳಿ ಗ್ರಾಮಗಳಲ್ಲಿ ಸುಮಾರು 1.5 ಕೋಟಿ ರು.ವೆಚ್ಚದ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್ ಆರ್ ವಿಶ್ವನಾಥ್ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ಎಸ್ ಎನ್ ರಾಜಣ್ಣ, ದಿಬ್ಬೂರು ಜಯಣ್ಣ, ಯಲಹಂಕ ಗ್ರಾ.ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿಶ್ವನಾಥಪುರ ಮಂಜುನಾಥ್, ಚೊಕ್ಕನಹಳ್ಳಿ ವೆಂಕಟೇಶ್, ಸಿಂಗನಾಯಕನಹಳ್ಳಿ ಗ್ರಾ.ಪಂ.ಅಧ್ಯಕ್ಷೆ ಅಮರಾವತಮ್ಮ, ಉಪಾಧ್ಯಕ್ಷೆ ಸುನಂದ ಪ್ರಕಾಶ್, ಮಾಜಿ ಅಧ್ಯಕ್ಷ ಟಿ.ಮುನಿರೆಡ್ಡಿ, ಮಾಜಿ ಉಪಾಧ್ಯಕ್ಷರಾದ ಎಸ್.ಜಿ.ಪ್ರಶಾಂತ್ ರೆಡ್ಡಿ, ಹೇಮಂತ್ ಕುಮಾರ್, ಜಿ.ಸಿ.ಮಂಜುನಾಥ್, ಜೀವಿತಾ ಮುನಿಕೃಷ್ಣ, ಬಿಜೆಪಿ ಮುಖಂಡ ಶಿವಾನಂದ, ಗ್ರಾ.ಪಂ.ಸದಸ್ಯರಾದ ಪದ್ಮಶ್ರೀ ನಾಗರಾಜ್ ರೆಡ್ಡಿ, ಶಾಂತಲಾ ರಾಜಣ್ಣ, ಕೆ.ಬಾಬು, ಮಲ್ಲೇಶ್, ಹರೀಶ್, ಸನಾತನನಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಜೆ., ಉಪಾಧ್ಯಕ್ಷ ಉಮೇಶ್, ಕಾರ್ಯದರ್ಶಿ ಶೇಷಾದ್ರಿ, ಖಜಾಂಚಿ ಸಂತೋಷ್ ಕುಮಾರ್ ಸೇರಿದಂತೆ ಇನ್ನಿತರರಿದ್ದರು.

ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ

R Hanumanthau kogilu layout

Yelahanka Bangalore

9845085793

Leave a Reply

Your email address will not be published. Required fields are marked *