ಧಾರವಾಡ:- ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ಐಪಿಎಸ್ ರೇಣುಕಾ ಸುಕುಮಾರ್ ಪೊಲೀಸ್ ಕಮಿಷನರ್ ಆಗಮನ. ನೂತನವಾಗಿ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅವರು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ್ದು 2011ರ   ಬ್ಯಾಚ್ ಐಎಎಸ್‌ ಅಧಿಕಾರಿ ಶ್ರೀಮತಿ ರೇಣುಕಾ ಕೆ. ಸುಕುಮಾರ್ ನಿಯುಕ್ತಿಗೊಂಡಿದ್ದಾರೆ. ಅವಳಿ ಮಹಾನಗರ ಇತಿಹಾಸದಲ್ಲಿಯೇ ರೇಣುಕಾ ಸುಕುಮಾರ್ ಅವರು ಪ್ರಥಮ ಮಹಿಳಾ ಪೊಲೀಸ್ ಆಯುಕ್ತೆ ಹಿರಿಮೆಗೆ ಪಾತ್ರರಾಗಿದ್ದಾರೆ.ಅವಳಿನಗರ ಕಮಿಷನರೇಟ್‌ಗೆ ಹಲವರ ಹೆಸರು ಕೇಳಿ ಬಂದಿದ್ದು ಅಂತಿಮವಾಗಿ ‘ಲೇಡಿ ಕಮೀಶನರ್’ ಎಂದು ಕೇಳಿ ಬಂದಿತ್ತು.ಬೆಂಗಳೂರಿನಲ್ಲಿ ಗೃಹ ರಕ್ಷಕ ದಳದ ಡೆಪ್ಯುಟಿ ಕಮಾಂಡೆಂಟ್ ಜನರಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರೇಣುಕಾ ಸುಕುಮಾರ್ ಅವರು ಹಂಗಾಮಿ ಆಯುಕ್ತರಾದ ಸಂತೋಷಬಾಬು ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ.ಈ ಮೊದಲು
ರೇಣುಕಾ ಅವರು ಹುಬ್ಬಳ್ಳಿಯಿಂದ ಕೊಪ್ಪಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದರು. 2017ರಲ್ಲಿ ಎಂ.ಎನ್.ನಾಗರಾಜ ಆಯುಕ್ತರಾಗಿದ್ದ ಅವಧಿಯಲ್ಲಿ ರೇಣುಕಾ ಅವರು ಡಿಸಿಪಿಯಾಗಿ ಕಾರ್ಯನಿರ್ವಹಿಸಿದ್ದು ಖಡಕ್ ಅಧಿಕಾರಿ ಎಂಬುದನ್ನು ಅವಳಿನಗರದಲ್ಲಿ ಹಲವಾರು ಪ್ರಕರಣಗಳಲ್ಲಿ ತೋರಿಸಿದ್ದಾರೆ.ಸದ್ಯ ಪ್ರಭಾರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ಸಂತೋಷ ಬಾಬು ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ.

ಹು-ಧಾ ಅವಳನಗರ ನೂತನ ಪೋಲಿಸ್ ಕಮಿಷನರ್ ರೇಣುಕಾ ಸುಕುಮಾರ್ ಅಧಿಕಾರ.

Leave a Reply

Your email address will not be published. Required fields are marked *

ಇದನ್ನೂ ಓದಿ

ಬೊಂಗೊಧಾರಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಯಲಹಂಕದಲ್ಲಿ ವಿಜೃಂಭಣೆಯ ದುರ್ಗಾ ಪೂಜೆ 2026​ಯಲಹಂಕ ಸುದ್ದಿ:ಬೆಂಗಳೂರಿನ ಯಲಹಂಕದ ವೈಟ್ ಪರ್ಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ರೇವ ಕಾಲೇಜ್ ಮುಖ್ಯ ರಸ್ತೆ, ಬೆಳ್ಳಿಹಳ್ಳಿ ಕ್ರಾಸ್) ಬೊಂಗೋಧರ ಸಾಂಸ್ಕೃತಿಕ ಸಂಘದ (Bongodhara Cultural Association) ನೇತೃತ್ವದಲ್ಲಿ ದುರ್ಗಾಪೂಜೆ 2026 ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.​ಕಾರ್ಯಕ್ರಮದ ವಿಶೇಷತೆಗಳು:​ಈ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.​ಆಗಮಿಸಿದ ಭಕ್ತರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.​ವ್ಯಾಪಾರಸ್ಥರಿಗಾಗಿ ಪ್ರತ್ಯೇಕವಾಗಿ ಸ್ಟಾಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.​ಪ್ರತಿ ವರ್ಷದಂತೆ ಈ ಬಾರಿಯೂ ಈ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ಸಡಗರದಿಂದ ನಡೆಯುತ್ತಿದೆ.