



ಯಲಹಂಕ : ಲೋಕೋಪಯೋಗಿ ಇಲಾಖೆಯ ಅನುದಾನದ ಅಡಿಯಲ್ಲಿ ಸುಮಾರು 1.5 ಕೋಟಿ ರು.ವೆಚ್ಚದಲ್ಲಿ ಕ್ಷೇತ್ರದ ರಾಜಾನುಕುಂಟೆ-ಮಧುರೆ ರಸ್ತೆಯಿಂದ ಇಟಗಲ್ ಪುರ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್ ಆರ್ ವಿಶ್ವನಾಥ್ ಗುರುವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು ‘ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕಾಮಗಾರಿಯ ಉಳಿಕೆ ರಸ್ತೆಗಳ ಅಭಿವೃದ್ಧಿಯ ಮುಂದುವರಿದ ಭಾಗವಾಗಿ ಇಂದು ಇಟಗಲ್ ಪುರದಲ್ಲಿ ಸುಮಾರು 1.5 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇಟಗಲ್ ಪುರ ಗ್ರಾಮ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಬೆಳವಣಿಗೆಯ ಲಯಕ್ಕೆ ತಕ್ಕಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕಿದೆ. ಇಟಗಲ್ ಪುರ ಗ್ರಾಮಕ್ಕೆ ಸುಮಾರು ಐದು ಸಂಪರ್ಕ ರಸ್ತೆಗಳಿದ್ದು, ಮಳೆ, ಬೃಹತ್ ವಾಹನಗಳ ಸಂಚಾರ ಮುಂತಾದ ಹಲವು ಕಾರಣಗಳಿಂದಾಗಿ ರಸ್ತೆಗಳು ಹದಗೆಟ್ಟಿರುವುದನ್ನು ಮನಗಂಡು ಸರ್ಕಾರದಿಂದ 1.5 ಕೋಟಿ ರು.ಗಳ ಅನುದಾನ ಪಡೆದುಕೊಂಡು ರಸ್ತೆ ಅಭಿವೃದ್ಧಿ ಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ಇನ್ನೂ ಹೆಚ್ಚಿನ ಅನುದಾನ ಪಡೆದು ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಶ್ರಮಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಡಿ.ಜಿ.ಅಪ್ಪಯ್ಯಣ್ಣ, ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿಶ್ವನಾಥಪುರ ಮಂಜುನಾಥ್, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಎಸ್.ಜಿ.ನರಸಿಂಹ ಮೂರ್ತಿ(ಎಸ್.ಟಿ.ಡಿ.ಮೂರ್ತಿ), ವೀರಣ್ಣ(ರಿಗ್ಲೆ), ಹೆಸರಘಟ್ಟ ಹೋಬಳಿ ಬಿಜೆಪಿ ಉಪಾಧ್ಯಕ್ಷ ಎಂ
ಮೋಹನ್ ಕುಮಾರ್, ಅಧ್ಯಕ್ಷ ವಸಂತ್ ಅರಕೆರೆ, ಬಿಜೆಪಿ ಮುಖಂಡರಾದ ಮಂಜುನಾಥ್, ಅರುಣ್ ಕುಮಾರ್, ಕೃಷ್ಣಪ್ಪ, ರಾಮಕೃಷ್ಣಪ್ಪ, ಚಿಕ್ಕಪ್ಪಯ್ಯ, ಚೊಕ್ಕನಹಳ್ಳಿ ನಾಗೇಶ್ ಸೇರಿದಂತೆ ಗ್ರಾಮಸ್ಥರಿದ್ದರು.
