ತಾಂತ್ರಿಕತೆಯ ಜೊತೆಗೆ ಸಂಸ್ಕೃತಿಯನ್ನು ಅಳವಡಿಸಿಕೊಂಡು ಬದುಕು ರೂಪಿಸಿಕೊಳ್ಳಿ : ಕ್ರಿಸ್ ಗೋಪಾಲಕೃಷ್ಣ
ಯಲಹಂಕ : ಸ್ಪರ್ಧಾತ್ಮಕ ಜಗತ್ತಿನಲ್ಲಿ ತಾಂತ್ರಿಕತೆಯ ಜೊತೆಗೆ ಸಂಸ್ಕೃತಿಯನ್ನು ಅಳವಡಿಸಿಕೊಂಡು ಬದುಕು ರೂಪಿಸಿಕೊಳ್ಳಬೇಕು ಎಂದು ಇನ್ಫೋಸಿಸ್ ನ ಸಹ ಸಂಸ್ಥಾಪಕ, ಪದ್ಮಭೂಷಣ ಕ್ರಿಸ್ ಗೋಪಾಲಕೃಷ್ಣ ಅವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಯಲಹಂಕದ ಶೇಷಾದ್ರಿಪುರಂ ಪದವಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ‘ಸುಸ್ಥಿರ ರಾಷ್ಟ್ರೀಯ ಅಭಿವೃದ್ಧಿಗೆ ಯಶಸ್ವಿ ನಾಯಕರ ಸಲಹೆ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು ‘ವಿದ್ಯಾರ್ಥಿಗಳು ತಾಂತ್ರಿಕತೆ ಮತ್ತು ಸಂಸ್ಕೃತಿ ಯೊಟ್ಟಿಗೆ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು. ದೇಶಕ್ಕೆ ಕೊಡುಗೆ ನೀಡಲು ಶಿಕ್ಷಣಕ್ಕಿಂತ ಸಮರ್ಥವಾದ ಅನ್ಯಸಾಧನಗಳಿಲ್ಲ. ಲಭ್ಯವಿರುವ ತಾಂತ್ರಿಕತೆಯನ್ನು ಸಮರ್ಥ ರೀತಿಯಲ್ಲಿ ಬಳಸಿಕೊಂಡು ವಿದ್ಯಾರ್ಥಿಗಳು ಹೇಗೆ ದೇಶಕ್ಕೆ ಅನುಪಮ‌ ಕೊಡುಗೆ ನೀಡಬಹುದು ಎಂಬುದನ್ನು ತಮ್ಮ ವೃತ್ತಿ ಬದುಕಿನ ಉದಾಹರಣೆಗಳ ಮೂಲಕ ವಿವರಿಸಿದರು.
ಕಾರ್ಯಕ್ರಮ ಉದ್ದೇಶಿಸಿ ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿ ವು.ಡೇ.ಪಿ.ಕೃಷ್ಣ ಅವರು ಮಾತನಾಡಿ ‘ಇನ್ಫೋಸಿಸ್ ಸಂಸ್ಥೆಯ ಸಹಸಂಸ್ಥಾಕರು, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರು ಆಗಿರುವ‌ ಕ್ರಿಸ್ ಗೋಪಾಲಕೃಷ್ಣ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಂತೋಷದ ಸಂಗತಿ, ಇಂತಹ ಯಶಸ್ವಿ ನಾಯಕರ ಸಲಹೆ, ಮಾರ್ಗದರ್ಶನ ನಮ್ಮ ವಿದ್ಯಾರ್ಥಿಗಳಿಗೆ ಅತ್ಯಗತ್ಯ. ಶೇಷಾದ್ರಿಪುರಂ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದ ಹಿರಿಯ ವಿದ್ಯಾರ್ಥಿ ಗುರುರಾಜ ರಾಜದೇಶಪಾಂಡೆ ಅವರು ಸಹ ಇನ್ಫೋಸಿಸ್ ಸಂಸ್ಥೆಯ ಸಹಸಂಸ್ಥಾಕರಲ್ಲಿ ಒಬ್ಬರು ಎಂಬುದು ಹೆಮ್ಮೆಯ ಸಂಗತಿ. ಕ್ರಿಸ್ ಗೋಪಾಲಕೃಷ್ಣ ಅವರು ಪ್ರಸ್ತುತ ಮೆದುಳಿನ ಕುರಿತ ವಿಶೇಷ ಸಂಶೋಧನೆಯಲ್ಲಿ ತೊಡಗಿದ್ದು, ಅದರ ಸಾಕಾರಕ್ಕಾಗಿ ಅವರು ತಾವು ಗಳಿಸಿದ ಹಣದ ಬಹುಭಾಗವನ್ನು ಮೀಸಲಿಟ್ಟು, ಜಗತ್ತಿಗೆ ಹೊಸದೊಂದು ಕೊಡುಗೆ ನೀಡಲು ಶ್ರಮಿಸುತ್ತಿದ್ದಾರೆ, ಅವರ ಪರಿಶ್ರಮಕ್ಕೆ ಯಶಸ್ಸು ದೊರಕಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಹಲವು ಕೌತುಕದ ಪ್ರಶ್ನೆಗಳಿಗೆ ಕ್ರಿಸ್ ಗೋಪಾಲಕೃಷ್ಣ ಅವರು ಉತ್ತರಿಸಿದರು.
ಕಾರ್ಯಕ್ರಮದಲ್ಲಿ ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಟ್ರಸ್ಟಿ ಡಬ್ಲ್ಯು.ಡಿ.ಅಶೋಕ್, ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ.ಎಸ್.ಎನ್.ವೆಂಕಟೇಶ್, ಡಾ.ವತ್ಸಲ ಜಿ., ಡಾ.ಸಂತನುದಾಸ್, ಡಾ.ವಿವೇಕಾನಂದ, ಡಾ.ಗೋದಾಮಣಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳಿದ್ದರು.

Leave a Reply

Your email address will not be published. Required fields are marked *