











ಬ್ಯಾಟರಾಯನಪುರ : ಕ್ಷೇತ್ರದ ದೊಡ್ಡಜಾಲ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಮುತ್ತುಗದಹಳ್ಳಿ ಗ್ರಾಮದ ಎ.ನಾಗರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ದೊಡ್ಡಜಾಲ ಗ್ರಾ.ಪಂ.ಯಲ್ಲಿ ಒಟ್ಟು 14 ಮಂದಿ ಸದಸ್ಯರಿದ್ದು, ಅಧ್ಯಕ್ಷರಾಗಿದ್ದ ಆರ್.ಬೈರೇಗೌಡ ಅವರ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶುಕ್ರವಾರ ನಡೆದ ಅಧ್ಯಕ್ಷರ ಆಯ್ಕೆ ಚುನಾವಣಾ ಪ್ರಕ್ರಿಯೆಯಲ್ಲಿ ಎ.ನಾಗರಾಜ್ ಅವರೊಬ್ಬರೆ ನಾಮಪತ್ರ ಸಲ್ಲಿಸಿದ್ದರಿಂದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ನೂತನ ಅಧ್ಯಕ್ಷರನ್ನು ಹಲವು ಕಾಂಗ್ರೆಸ್ ಮುಖಂಡರು,ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಸನ್ಮಾನಿಸಿ ಅಭಿನಂದಿಸಿದರು.
ಈ ವೇಳೆ ನೂತನ ಅಧ್ಯಕ್ಷ ಎ.ನಾಗರಾಜ್ ಮಾತನಾಡಿ ‘ಅಧ್ಯಕ್ಷನಾಗಿ ಅವಿರೋಧವಾಗಿ ಆಯ್ಕೆಯಾಗಲು ಸಹಕರಿಸಿರುವ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರಿಗೆ ಕೃತಜ್ಞತೆಯ ಧನ್ಯವಾದಗಳು, ಸಚಿವರ ಸಲಹೆ, ಮಾರ್ಗದರ್ಶನ ಮತ್ತು ಸರ್ವ ಸದಸ್ಯರ ವಿಶ್ವಾಸದೊಂದಿಗೆ ಗ್ರಾ.ಪಂ.ವ್ಯಾಪ್ತಿಯ ಗ್ರಾಮಗಳ ಪ್ರಗತಿಗೆ ಶ್ರಮಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿ.ಪಂ.ಮಾಜಿ ಅಧ್ಯಕ್ಷ ಕೆ.ಅಶೋಕನ್, ತಾ.ಪಂ.ಮಾಜಿ ಅಧ್ಯಕ್ಷ ನಾಗರಾಜ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಮೈಲನಹಳ್ಳಿ ರಾಜಕುಮಾರ್, ತಾ.ಪಂ.ಮಾಜಿ ಸದಸ್ಯ ಉದಯ್ ಶಂಕರ್, ದೊಡ್ಡಜಾಲ ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಎನ್.ಕೆ.ಮಹೇಶ್ ಕುಮಾರ್, ಆರ್.ಬೈರೇಗೌಡ, ಹಂಸವೇಣಿ ಮಂಜುನಾಥ್, ಉಪಾಧ್ಯಕ್ಷೆ ಗೌರಮ್ಮ ಕೃಷ್ಣಪ್ಪ, ಜಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಜೈಕುಮಾರ್, ಬಾಗಲೂರು ಗ್ರಾ.ಪಂ.ಅಧ್ಯಕ್ಷ ಎ.ಕೆಂಪೇಗೌಡ, ಮಾಜಿ ಅಧ್ಯಕ್ಷ, ಡಿ.ಜಗನ್ನಾಥ್, ಬೆಟ್ಟಹಲಸೂರು ಗ್ರಾ.ಪಂ.ಮಾಜಿ ಅಧ್ಯಕ್ಷ ಬಿ.ಎಂ.ನಾಗೇಶ್, ಹಾಲಿ ಉಪಾಧ್ಯಕ್ಷ ಬಿ.ಆರ್.ಪ್ರವೀಣ್, ಬಾಗಲೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎ.ವೆಂಕಟರಾಜು, ಕಾಂಗ್ರೆಸ್ ಮುಖಂಡರಾದ ಶೆಟ್ಟಿಗೆರೆ ರಾಜಣ್ಣ, ಅಪ್ಪಾಜಿ, ಬಾಗಲೂರು ಅಮರನಾರಾಯಣ್, ಮಂಜುನಾಥ್, ಯುವ ಕಾಂಗ್ರೆಸ್ ಮುಖಂಡರಾದ ಪ್ರದೀಪ್(ಮುತ್ತು), ಸಿ.ಎ.ಶಿವರಾಜ್, ಮೀಸಗಾನಹಳ್ಳಿ ನಾರಾಯಣಗೌಡ, ಪ್ರಭಾಕರ್, ಚಿಕ್ಕಜಾಲ ಶಿವು, ಕುದುರಗೆರೆ ಮಂಜುನಾಥ್, ಶೆಟ್ಟಿಗೆರೆ ಚೇತನ್ ಸೇರಿದಂತೆ ಗ್ರಾ.ಪಂ.ಸದಸ್ಯರಿದ್ದರು.
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ
R Hanumanthau kogilu layout
Yelahanka Bangalore Karnataka
9845085793
