ಡಾ.ವಾಣಿಶ್ರೀ ವಿಶ್ವನಾಥ್ ಅವರ ಜನ್ಮದಿನ :

ಬಿಜೆಪಿ ಮುಖಂಡರು, ಹಿತೈಷಿಗಳು, ಅಭಿಮಾನಿಗಳಿಂದ ಶುಭ ಹಾರೈಕೆ :

ಯಲಹಂಕ : ಸಿಂಗನಾಯಕನಹಳ್ಳಿ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರು, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು, ಸಹಕಾರ ಸೇವಾ ರತ್ನ ಪ್ರಶಸ್ತಿ ಪುರಸ್ಕೃತರಾದ ಡಾ.ವಾಣಿಶ್ರೀ ವಿಶ್ವನಾಥ್ ಅವರ ಜನ್ಮದಿನದ ಪ್ರಯುಕ್ತ ಯಲಹಂಕ ಕ್ಷೇತ್ರದ ಹಲವು ಬಿಜೆಪಿ ಮುಖಂಡರು, ವಾಣಿಶ್ರೀ ವಿಶ್ವನಾಥ್ ಅವರ ಹಿತೈಷಿಗಳು, ಅಭಿಮಾನಿ ಗಳು ಸೇರಿದಂತೆ ಹಲವು ಗಣ್ಯರು ತಮ್ಮ ನೆಚ್ಚಿನ ನಾಯಕಿ ಡಾ.ವಾಣಿಶ್ರೀ ವಿಶ್ವನಾಥ್ ಅವರಿಗೆ ಸನ್ಮಾನಿಸಿ ಜನ್ಮದಿನದ ಶುಭ ಹಾರೈಸಿದರು.

ವಾಣಿಶ್ರೀ ವಿಶ್ವನಾಥ್ ಅವರ ಜನ್ಮದಿನದ ಪ್ರಯುಕ್ತ ರಾಜಾನುಕುಂಟೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಎಸ್.ಜಿ.ನರಸಿಂಹಮೂರ್ತಿ (ಎಸ್.ಟಿ.ಡಿ.ಮೂರ್ತಿ), ಶ್ರೀಮತಿ ವಿಜಯ ನರಸಿಂಹಮೂರ್ತಿ ಅವರು ಡಾ.ವಾಣಿಶ್ರೀ ವಿಶ್ವನಾಥ್ ಅವರಿಗೆ ಗೌರವ ಸನ್ಮಾನ ನೀಡಿ ಜನ್ಮದಿನದ ಶುಭ ಹಾರೈಸಿದರು.

ಇದೇ ವೇಳೆ ಡಾ.ವಾಣಿಶ್ರೀ ವಿಶ್ವನಾಥ್ ಅವರು ಎಸ್.ಜಿ.ನರಸಿಂಹಮೂರ್ತಿ, ಶ್ರೀಮತಿ ವಿಜಯ ನರಸಿಂಹಮೂರ್ತಿ ಅವರಿಗೆ ವಿವಾಹ ವಾರ್ಷಿಕೋತ್ಸವದ ಶುಭ ಹಾರೈಸಿ ಹರಸಿದರು.

ಇದೇ ಸಂದರ್ಭದಲ್ಲಿ, ಹಿರಿಯ ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್.ಎನ್.ರಾಜಣ್ಣ, ಡಿ‌.ಜಿ.ಅಪ್ಪಯ್ಯಣ್ಣ, ಚೊಕ್ಕನಹಳ್ಳಿ ವೆಂಕಟೇಶ್, ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಎಂ‌.ಜಿ.ರಾಮಮೂರ್ತಿ, ಪ್ರಧಾನ ಕಾರ್ಯದರ್ಶಿ ವಿಶ್ವನಾಥಪುರ ಮಂಜುನಾಥ್, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ, ಬಮೂಲ್ ನಿರ್ದೇಶಕ ಸತೀಶ್ ಕಡತನಮಲೆ, ಕಾಕೋಳು ಮುನೇಶ್, ಸಿಂಗನಾಯಕನಹಳ್ಳಿ ಗ್ರಾ.ಪಂ‌.ಮಾಜಿ ಅಧ್ಯಕ್ಷ ಟಿ.ಮುನಿರೆಡ್ಡಿ, ರಾಜಾನುಕುಂಟೆ ಗ್ರಾ.ಪಂ.ಮಾಜಿ‌ ಅಧ್ಯಕ್ಷ ವೀರಣ್ಣ, ಹೆಸರಘಟ್ಟ ಹೋಬಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಪ್ರಶಾಂತ್ ರೆಡ್ಡಿ, ಉಪಾಧ್ಯಕ್ಷ ಇಟಗಲ್ ಪುರ ಮೋಹನ್, ಮುಖಂಡರಾದ ಶಿವಾನಂದ್, ಯುವ ಮುಖಂಡ ಸಾದೇನಹಳ್ಳಿ ಪ್ರಕಾಶ್ ಗೌಡ ಸೇರಿದಂತೆ ಇನ್ನಿತರರಿದ್ದರು.

Leave a Reply

Your email address will not be published. Required fields are marked *