







ಸಿಂಗನಾಯಕನಹಳ್ಳಿ ಗ್ರಾ.ಪಂ.ಸದಸ್ಯರಿಂದ ಶುಭ ಹಾರೈಕೆ :
ಯಲಹಂಕ : ಸಿಂಗನಾಯಕನಹಳ್ಳಿ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರು, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು, ಸಹಕಾರ ಸೇವಾ ರತ್ನ ಪ್ರಶಸ್ತಿ ಪುರಸ್ಕೃತರಾದ ಡಾ.ವಾಣಿಶ್ರೀ ವಿಶ್ವನಾಥ್ ಅವರ ಜನ್ಮದಿನದ ಪ್ರಯುಕ್ತ ಗುರುವಾರ ಸಿಂಗನಾಯಕನಹಳ್ಳಿ ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಡಾ.ವಾಣಿಶ್ರೀ ವಿಶ್ವನಾಥ್ ಅವರಿಗೆ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಜನ್ಮದಿನದ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಸಿಂಗನಾಯಕನಹಳ್ಳಿ ಗ್ರಾ.ಪಂ.ಅಧ್ಯಕ್ಷೆ ಅಮರಾವತಮ್ಮ, ಉಪಾಧ್ಯಕ್ಷೆ ಸುನಂದ ಪ್ರಕಾಶ್, ಮಾಜಿ ಅಧ್ಯಕ್ಷ ಟಿ.ಮುನಿರೆಡ್ಡಿ, ಮಾಜಿ ಉಪಾಧ್ಯಕ್ಷರಾದ ಎಸ್.ಜಿ.ಪ್ರಶಾಂತ್ ರೆಡ್ಡಿ, ಹೇಮಂತ್ ಕುಮಾರ್, ಜಿ.ಸಿ.ಮಂಜುನಾಥ್, ಜೀವಿತಾ ಮುನಿಕೃಷ್ಣ, ಗ್ರಾ.ಪಂ.ಸದಸ್ಯರಾದ ಪದ್ಮಶ್ರೀ ನಾಗರಾಜ್ ರೆಡ್ಡಿ, ಶಾಂತಲಾ ರಾಜಣ್ಣ, ಭಾಗ್ಯಲಕ್ಷ್ಮಿ ಕಿರಣ್ ಕುಮಾರ್, ನಂಜೇಗೌಡ, ಶೋಭಾ ಗೋಪಾಲ್, ಚೈತ್ರ ಕೆಂಪೇಗೌಡ, ಗಿರೀಶ್, ಕೆ.ಬಾಬು, ಮಲ್ಲೇಶ್, ಹರೀಶ್, ಬಿಜೆಪಿ ಮುಖಂಡರಾದ ತಿಮ್ಮರಾಯಿಗೌಡ, ನಾಗರಾಜ್ ರೆಡ್ಡಿ, ರಾಮಚಂದ್ರರೆಡ್ಡಿ, ಸತೀಶ್ ರೆಡ್ಡಿ, ಕಿರಣ್ ಕುಮಾರ್, ನಾಗೇನಹಳ್ಳಿ ಶಿವಕುಮಾರ್, ಶ್ರೀ ವೀರಾಂಜನೇಯಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ಶ್ರೀ ಶೈಲಮೂರ್ತಿ ಸೇರಿದಂತೆ ಇನ್ನಿತರರಿದ್ದರು.
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ
R Hanumanthau kogilu layout
Yelahanka Bangalore Karnataka
9845085793
