
ಬೆಂಗಳೂರು | ದಿನಾಂಕ: 21/12/2025.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮಾನ್ಯ ಅಧ್ಯಕ್ಷರಾದ ಶ್ರೀ ವಿ ಎಸ್, ಆರಾಧ್ಯರವರು ಇಂದು ಸಂಜೆ ಬೆಳಿಗ್ಗೆ 9.00 ಗಂಟೆಗೆ ನಗರದ ಪ್ರಮುಖ ಸಾರಿಗೆ ಕೇಂದ್ರವಾದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಆಯೋಜಿಸಲಾದ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಿದರು.
ಈ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮವನ್ನು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಹಾಗೂ ರೋಟರಿ ಕ್ಲಬ್ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ಸಮಾಜದಲ್ಲಿ ಮಕ್ಕಳ ಆರೋಗ್ಯ ಭದ್ರತೆ ಹಾಗೂ ಪೋಲಿಯೊ ಮುಕ್ತ ಭಾರತ ನಿರ್ಮಾಣದ ಮಹತ್ವವನ್ನು ಮನಗಾಣಿಸುವ ಉದ್ದೇಶವನ್ನು ಹೊಂದಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಮಾನ್ಯ ಅಧ್ಯಕ್ಷರವರು, ಪಲ್ಸ್ ಪೋಲಿಯೊ ಲಸಿಕೆ ಅಭಿಯಾನವು ರಾಷ್ಟ್ರದ ಭವಿಷ್ಯವಾದ ಮಕ್ಕಳ ಆರೋಗ್ಯವನ್ನು ರಕ್ಷಿಸುವಲ್ಲಿ ಅತ್ಯಂತ ಪ್ರಮುಖವಾಗಿದ್ದು, ಸಾರ್ವಜನಿಕ ಸಹಭಾಗಿತ್ವ ಮತ್ತು ಸ್ವಯಂಸೇವಾ ಸಂಸ್ಥೆಗಳ ಪಾತ್ರ ಅನನ್ಯವೆಂದು ಹೇಳಿದರು. ಇಂತಹ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸದಾ ಸಕ್ರಿಯವಾಗಿ ಕೈಜೋಡಿಸುತ್ತಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ GBA ಹಾಗೂ ರೋಟರಿ ಕ್ಲಬ್‌ನ ಪದಾಧಿಕಾರಿಗಳು, ವೈದ್ಯರು, ಸ್ವಯಂಸೇವಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಬೆಂಬಲ ನೀಡಿದರು.
ಈ ಸಂಕ್ಷಿಪ್ತ ಮಾಹಿತಿಯನ್ನು ತಮ್ಮ ಪ್ರತಿಷ್ಠಿತ ಪತ್ರಿಕೆ ಮತ್ತು ಮಾಧ್ಯಮಗಳಲ್ಲಿ ಪ್ರಕಟಿಸಬೇಕೆಂದು ಕೋರಲಾಗಿದೆ ಧನ್ಯವಾದಗಳೊಂದಿಗೆ.
