ಚಿಕ್ಕಬಳ್ಳಾಪುರ: ತಾಲ್ಲೂಕಿನ ರಾಗಿಮಾಕಲಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಎಸ್‍ಆರ್‍ಎಸ್ ಅಕ್ಷತಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತವಾಗಿ ಧ್ವನಿವರ್ದಕವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಎಸ್‍ಆರ್‍ಎಸ್ ಅಕ್ಷತಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎಸ್‍ಆರ್‍ಎಸ್ ವಿ.ದೇವರಾಜ್, ಸರ್ಕಾರಿ ಶಾಲೆಯ ಮಕ್ಕಳ ಕಲಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಸ್‍ಆರ್‍ಎಸ್ ಅಕ್ಷತಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಶೈಕ್ಷಣಿಕವಾಗಿ ಹಲವು ಸೇವಾ ಕಾರ್ಯಗಳನ್ನು ಮಾಡಲಾಗುತ್ತಿದ್ದು, ಇಂದು ರಾಗಿಮಾಕಲಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಧ್ವನಿವರ್ದಕವನ್ನು ವಿತರಿಸಲಾಗಿದೆ ಎಂದು ತಿಳಿಸಿದರು.
ಸರ್ಕಾರಿ ಶಾಲಾ-ಕಾಲೇಜುಗಳಿಗೆ ವಿದ್ಯಾಭ್ಯಾಸ ಕಲಿಯಲು ಬರುವವರು ರೈತಾಪಿ, ಕಾರ್ಮಿಕ, ಬಡ ಕುಟುಂಬಗಳಿಂದ ಬಂದಿರುವಂತವರು. ಹೀಗಾಗಿ ಶಾಲೆಯ ವಿದ್ಯಾರ್ಥಿಗಳು ಗುರಿ ಇಟ್ಟು ಶ್ರದ್ಧೆ ವಹಿಸಿ ವಿದ್ಯಾಭ್ಯಾಸ ಕಲಿತರೆ ಉನ್ನತ ಹುದ್ದೆಗಳನ್ನು ಅಲಂಕರಿಸುವ ಜೊತೆಗೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಪೋಷಕರ ಆಸೆಗಳನ್ನು ಈಡೇರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಹಣ ಇಂದು ಇರುತ್ತೆ ನಾಳೆ ಹೋಗುತ್ತೆ. ಹಣವನ್ನು ಯಾರಾದರೂ ಕದಿಯಬಹುದು. ಆದರೆ ಶ್ರದ್ಧೆ ವಹಿಸಿ ಸಂಪಾಧಿಸಿದ ವಿದ್ಯೆಯನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ. ಹಾಗಾಗಿ ವಿದ್ಯೆಯಿಂದ ಪ್ರತಿ ವಿದ್ಯಾರ್ಥಿಯು ಉನ್ನತ ಸಾಧನೆ ಮಾಡಬಹುದು. ಇದಕ್ಕಾಗಿ ಸತತ ಪ್ರಯತ್ನ, ಶಿಸ್ತುಬದ್ಧವಾದ ಯೋಜನಾ ಕ್ರಮ ರೂಢಿಸಿಕೊಳ್ಳಬೇಕೆಂದರು.
ಮುಖ್ಯ ಶಿಕ್ಷಕ ಚಂದ್ರಶೇಖರ್ ಮಾತನಾಡಿ, ಗ್ರಾಮೀಣ ಪ್ರದೇಶದ ಸರ್ಕಾರಿ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಅಗತ್ಯವಿರುವ ಸೌಲಭ್ಯಗಳನ್ನು ಕೊಡುಗೆಯಾಗಿ ನೀಡುತ್ತಿರುವ ಎಸ್‍ಆರ್‍ಎಸ್ ವಿ.ದೇವರಾಜ್ ಅವರಿಗೆ ಶಾಲೆಯ ಪರವಾಗಿ ಕೃತಜ್ಞತೆ ಸಲ್ಲಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ರಮೇಶ್, ಸುಬ್ರಯಪ್ಪ, ಲಕ್ಷ್ಮೀನರಸಿಂಹಪ್ಪ, ಚಂದ್ರು, ವೆಂಕಟೇಶ್, ಎಸ್‍ಡಿಎಂಸಿ ಸಮಿತಿಯ ಅಧ್ಯಕ್ಷ ಮಂಜುನಾಥ್, ಸದಸ್ಯರಾದ ಆನಂದ್, ಬಿಸೇಜಪ್ಪ, ಕಿರಣ್, ಮುರಳಿ ಮತ್ತಿತರರು ಇದ್ದರು.

ವಿದ್ಯೆಯಿಂದ ಉತ್ತಮ ಭವಿಷ್ಯ ಸಾಧ್ಯ-ಎಸ್‍ಆರ್‍ಎಸ್ ದೇವರಾಜ್
ಎಸ್‍ಆರ್‍ಎಸ್ ಅಕ್ಷತಾ ಚಾರಿಟಬಲ್ ಟ್ರಸ್ಟ್ ವತಿಯಿಂದ ರಾಗಿಮಾಕಲಹಳ್ಳಿ ಸರ್ಕಾರಿ ಶಾಲೆಗೆ ಧ್ವನಿವರ್ಧಕ ವಿತರಣೆ

Leave a Reply

Your email address will not be published. Required fields are marked *