









ಬ್ಯಾಟರಾಯನಪುರ ಕ್ಷೇತ್ರ ಬಿಜೆಪಿ 2026ನೇ ಸಾಲಿನ ಹೊಸ ವರ್ಷದ ದಿನದರ್ಶಿಕೆ ಬಿಡುಗಡೆ :
ಬ್ಯಾಟರಾಯನಪುರ : ಬಿಜೆಪಿ ರಾಜ್ಯ ಕಾರ್ಯದರ್ಶಿ ಎಚ್.ಸಿ.ತಮ್ಮೇಶ್ ಗೌಡ ಅವರ ಮಾರ್ಗದರ್ಶನದಲ್ಲಿ, ಬ್ಯಾಟರಾಯನಪುರ ನಗರ ಮಂಡಲ ಬಿಜೆಪಿ ಉಪಾಧ್ಯಕ್ಷ ಡಾ.ಎಸ್.ಯೋಗೇಶ್ ಬೆಸ್ತರ್ ಅವರ ಸಹಯೋಗದೊಂದಿಗೆ ನೂತನವಾಗಿ ಮುದ್ರಣಗೊಂಡಿದ್ದ ‘ಬ್ಯಾಟರಾಯನಪುರ ಕ್ಷೇತ್ರ ಬಿಜೆಪಿ 2026ನೇ ಸಾಲಿನ ಹೊಸ ವರ್ಷದ ದಿನದರ್ಶಿಕೆಯನ್ನು ಸಾದೇನಹಳ್ಳಿ ಸಮೀಪದ ಡಾ.ಎಸ್.ಯೋಗೇಶ್ ಬೆಸ್ತರ್ ಅವರ ಫಾರ್ಮಹೌಸ್ ನಲ್ಲಿ ಭಾನುವಾರ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು.
ಮಹತ್ವದ ಈ ಕಾರ್ಯಕ್ರಮದಲ್ಲಿ ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಹನುಮಂತಗೌಡ, ನಗರ ಮಂಡಲ ಬಿಜೆಪಿ ಅಧ್ಯಕ್ಷ ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಮಧುಸೂದನ್ ಆರ್., ಕೋಗಿಲು ವಾರ್ಡ್ ಬಿಜೆಪಿ ಅಧ್ಯಕ್ಷ ಅನಿಲ್ ಕೆ.ಎ., ಬಿಜೆಪಿ ಮುಖಂಡರಾದ ಮುನಿಸ್ವಾಮಿ ಒಡೆಯರ್(ಆನಂದ್ ಮಾಸ್ಟರ್), ಪುಟ್ಟರಾಜು, ಮನೋಹರ್, ಸುನಿಲ್, ಗೋವಿಂದರಾಜು, ಮುರಳಿ, ಕಿರಣ್ ಸೇರಿದಂತೆ ಇನ್ನಿತರರಿದ್ದರು.
ಇದೇ ವೇಳೆ ಸುಮಾರು200ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಪ್ರಧಾನ ಮಂತ್ರಿಗಳ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಿಸಿ, ಕೋಗಿಲು ವಾರ್ಡ್ ನ 36 ಬೂತ್ ಗಳ ಅಧ್ಯಕ್ಷರು ಸೇರಿದಂತೆ ಒಟ್ಟು 75 ಜನ ಮನ್ ಕೀ ಬಾತ್ ಕಾರ್ಯಕ್ರಮವನ್ನು ಸರಳ ಆ್ಯಪ್ ನಲ್ಲಿ ಅಪ್ ಲೋಡ್ ಮಾಡಿದರು.
