












ಬ್ಯಾಟರಾಯನಪುರ : ಕ್ಷೇತ್ರದ ಸಾತನೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಹೊಸಹಳ್ಳಿ ಗ್ರಾಮದ ಸುಜಾತ ಎಸ್.ಎಲ್.ಆನಂದ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಾತನೂರು ಗ್ರಾ.ಪಂ.ಯಲ್ಲಿ ಒಟ್ಟು 11 ಮಂದಿ ಸದಸ್ಯರಿದ್ದು, ಅಧ್ಯಕ್ಷರಾಗಿದ್ದ ಎಂ.ಕೃಷ್ಣಪ್ಪ ಅವರ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶನಿವಾರ ನಡೆದ ಅಧ್ಯಕ್ಷರ ಆಯ್ಕೆ ಚುನಾವಣಾ ಪ್ರಕ್ರಿಯೆಯಲ್ಲಿ ಸುಜಾತ ಎಸ್ ಎಲ್ ಆನಂದ್ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ನೂತನ ಅಧ್ಯಕ್ಷರನ್ನು ಹಲವು ಮುಖಂಡರು,ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಸನ್ಮಾನಿಸಿ ಅಭಿನಂದಿಸಿದರು.
ಈ ವೇಳೆ ನೂತನ ಅಧ್ಯಕ್ಷೆ ಸುಜಾತ ಆನಂದ್ ಅವರು ಮಾತನಾಡಿ ‘ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಲು ಅಮೂಲ್ಯವಾದ ಬೆಂಬಲ ನೀಡಿ ಸಹಕರಿಸಿರುವ ಎಲ್ಲಾ ಸದಸ್ಯರಿಗೂ ಧನ್ಯವಾದಗಳು. ಸದಸ್ಯರ ವಿಶ್ವಾಸದೊಂದಿಗೆ ಗ್ರಾ.ಪಂ.ವ್ಯಾಪ್ತಿಯ ಗ್ರಾಮಗಳ ಪ್ರಗತಿಗೆ ಶ್ರಮಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಮಾಲಾ ಸುಬ್ರಮಣಿ, ಮಾಜಿ ಅಧ್ಯಕ್ಷರಾದ ಎಂ.ಕೃಷ್ಣಪ್ಪ, ಶಿವಣ್ಣ, ಸದಸ್ಯರಾದ ಮಾನಸ, ಅಶ್ವಿನಿ, ಮುನಿತಿಮ್ಮರಾಯಪ್ಪ, ನಾರಾಯಣಸ್ವಾಮಿ ಸೇರಿದಂತೆ ಇನ್ನಿತರರಿದ್ದರು.
