ಇಂದಿನಿಂದ ವಿದ್ಯಾರಣ್ಯಪುರದಲ್ಲಿ ನಾಲ್ಕು ದಿನಗಳ ‘ಸಂಕ್ರಾಂತಿ ಸಂಭ್ರಮ’, ಅವರೆ ಬೇಳೆ ಮೇಳ :
ಬ್ಯಾಟರಾಯನಪುರ : ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ, ರಾಜ್ಯ ಒಕ್ಕಲಿಗರ ಸಂಘದ ಮಾಜಿ‌ ನಿರ್ದೇಶಕ, ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಎ.ರವಿ ಅವರ ನೇತೃತ್ವದಲ್ಲಿ ಬ್ಯಾಟರಾಯನಪುರ ಕ್ಷೇತ್ರದ ವಿದ್ಯಾರಣ್ಯಪುರದ ಎನ್.ಟಿ.ಐ.ಮೈದಾನದಲ್ಲಿ ಇಂದಿನಿಂದ ನಾಲ್ಕು ದಿನಗಳ ಸಂಕ್ರಾಂತಿ ಸಂಭ್ರಮ-2026 ಕಾರ್ಯಕ್ರಮ ಆಯೋಜಿಸ ಲಾಗಿದ್ದು, ಸಂಕ್ರಾಂತಿ ಸಂಭ್ರಮದ ಅಂಗವಾಗಿ ಇದೇ ಪ್ರಥಮ ಬಾರಿಗೆ ಅವರೆ ಬೇಳೆ ಮೇಳವನ್ನು ಆಯೋಜಿಸಲಾಗಿದೆ.
ಸಂಕ್ರಾಂತಿ ಸಂಭ್ರಮ-2026ರ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಎ.ರವಿ ಮಾತನಾಡಿ ‘ಭಾನುವಾರ ಸಂಜೆ 6 ಗಂಟೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸ ಲಿದ್ದು, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿ ದ್ದಾರೆ. ಸಂಜೆ 7 ಗಂಟೆಗೆ ಜಿ.ಕನ್ನಡ‌‌ ಸರಿಗಮಪ‌ ಖ್ಯಾತಿಯ ಕಲಾವಿದರಿಂದ ಸಂಗೀತ ಕಾರ್ಯಕ್ರಮವಿದೆ.
ಸೋಮವಾರ ಸಂಜೆ 4ರಿಂದ 6ರವರೆಗೆ ಸ್ಥಳೀಯ ಶಾಲಾ‌‌ ಮಕ್ಕಳಿಗೆ ಚಿತ್ರಕಲೆ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳಿದ್ದು, ತೊಗಲು ಬೊಂಬೆಗಳ ಆಟದ ಪ್ರದರ್ಶನ ವಿಶೇಷತೆಯಾಗಿದೆ. ಮಾಜಿ ಮುಖ್ಯಮಂತ್ರಿ ಗಳು, ಮಾಜಿ‌ ಲೋಕಸಭಾ ಸದಸ್ಯರಾದ ಡಿ.ವಿ.ಸದಾನಂದಗೌಡ ಮತ್ತು ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 
ಮಂಗಳವಾರ ಮಧ್ಯಾಹ್ನ 12ರಿಂದ ದೇಶೀಯ ಆಟಗಳಾದ ಟಗರು ಸ್ಪರ್ಧೆ, ಗುಂಡು ಎತ್ತುವ‌ ಸ್ಪರ್ಧೆ, ಮೂಟೆ ಎತ್ತುವ ಸ್ಪರ್ಧೆ ಗಳನ್ನು ಏರ್ಪಡಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಮತ್ತು ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರು ಅಂದಿನ ಕಾರ್ಯಕ್ರಮದ ಮುಖ್ಯ ಅಥಿಗಳಾಗಿ ಭಾಗವಹಿಸಲಿದ್ದಾರೆ. ಖ್ಯಾತ ಜನಪದ ಗಾಯಕ ಗುರುರಾಜ್ ಹೊಸಕೋಟೆ ಅವರ ತಂಡದಿಂದ ಜಾನಪದ ಗೀತೆಗಳು ಮತ್ತು ‌ಭಾವಗೀತೆಗಳ ಗಾಯನ ಕಾರ್ಯಕ್ರಮವಿದೆ.
ಬುಧವಾರ ಮದ್ಯಾಹ್ನ 12ರಿಂದ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ದೇಶಿ ಹಸುಗಳ ಪ್ರದರ್ಶನ ಮುಂತಾದ ಸ್ಪರ್ಧೆಗಳಿವೆ. ಸಂಜೆ ನಡೆಯಲಿರುವ ವೇದಿಕೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ‌ ವಿರೋಧ ಪಕ್ಷದ ನಾಯಕರು, ಮಾಜಿ ಉಪ ಮುಖ್ಯಮಂತ್ರಿಗಳಾದ ಆರ್.ಅಶೋಕ್ ಅವರು ಪಾಲ್ಗೊಳ್ಳಲಿದ್ದು, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಣೆ ಮಾಡಲಿದ್ದಾರೆ ಎಂದು ನಾಲ್ಕು ದಿನಗಳ‌ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮ ಕುರಿತು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಅಶ್ವತ್ಥ ನಾರಾಯಣಗೌಡ, ಪಿಳ್ಳಪ್ಪ, ಮಹೇಶ್, ಮಂಜುನಾಥ್, ಮೋಹನ್ ರಾಜ್ ಸೇರಿದಂತೆ ಇನ್ನಿತರರಿದ್ದರು.

ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ

R Hanumanthau kogilu layout

Yelahanka Bangalore Karnataka

9845085793.    7349337989

Leave a Reply

Your email address will not be published. Required fields are marked *