
ಕೃಷ್ಣರಾಜಪೇಟೆ ವರದಿ:
ಚಿಲ್ಲದಹಳ್ಳಿ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ: ಪತ್ರಕರ್ತ ಶ್ರೀನಿವಾಸ್ ಅವರಿಂದ ಧ್ವಜಾರೋಹಣ;
ತಾಲೂಕಿನ ಚಿಲ್ಲದಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು,
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗ್ರಾಮ ಪಂಚಾಯಿತಿ ಸದಸ್ಯ ಪತ್ರಕರ್ತರಾದ ಶ್ರೀನಿವಾಸ್ ರವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು,
ನಂತರ ಮಾತನಾಡಿದ ಅವರು ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು ಮತ್ತು ಘನತೆಯನ್ನು ನೀಡಿದೆ. ಇಂದಿನ ವಿದ್ಯಾರ್ಥಿಗಳು ಸಂವಿಧಾನದ ಆಶಯಗಳನ್ನು ಮೈಗೂಡಿಸಿಕೊಂಡು ದೇಶದ ಉತ್ತಮ ಪ್ರಜೆಗಳಾಗಬೇಕು, ಎಂದು ತಿಳಿಸಿದರು,
ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿ ಅಧ್ಯಕ್ಷ ಸಿ.ಎನ್. ಸತೀಶ್ ಅವರು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಹಾರೈಸಿದರು,
ಶಾಲೆಯ ಮುಖ್ಯ ಶಿಕ್ಷಕರಾದ ರಮೇಶ್ ರವರು ಕಾರ್ಯಕ್ರಮವನ್ನು ನಿರ್ವಹಿಸಿ, ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ಚಿಲ್ಲದಹಳ್ಳಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಸೇರಿದಂತೆ ಇನ್ನೂ ಹಲವು ಭಾಗವಹಿಸಿದ್ದರು,
ಧ್ವಜಾರೋಹಣದ ನಂತರ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳ ಗಾಯನ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ನಡೆದವು,
ವರದಿಯೋಂದಿಗೆ: ಸಾಯಿಕುಮಾರ್. ಎನ್. ಕೆ
