ಬಿ.ಎಸ್.ಬಸವರಾಜು ಅವರ ಜನ್ಮದಿನ :

ಬಿಜೆಪಿ ಮುಖಂಡರು, ವೀರಶೈವ ಲಿಂಗಾಯತ ಮುಖಂಡರಿಂದ ಶುಭ ಹಾರೈಕೆ :

ಬ್ಯಾಟರಾಯನಪುರ : ಬ್ಯಾಟರಾಯನಪುರ ಗ್ರಾಮಾಂತರ ‌ಮಂಡಲ ಬಿಜೆಪಿ ಉಪಾಧ್ಯಕ್ಷರು, ಬೆಟ್ಟಹಲಸೂರು ವೀರಶೈವ ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷರಾದ ಬಿ.ಎಸ್.ಬಸವರಾಜು ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಚ್.ಸಿ.ತಮ್ಮೇಶ್ ಗೌಡ ಅವರು ಹಾಗೂ ವೀರಶೈವ ಲಿಂಗಾಯತ ಸಮುದಾಯದ ಹಲವು ಮುಖಂಡರು ಬೆಟ್ಟಹಲಸೂರು ಗ್ರಾಮದಲ್ಲಿನ ಬಿ‌.ಎಸ್.ಬಸವರಾಜು ಅವರ ಮನೆಗೆ ಭೇಟಿ ನೀಡಿ, ಅವರಿಗೆ ಗೌರವ ಸನ್ಮಾನ ನೀಡಿ ಜನ್ಮದಿನದ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಹನುಮಂತಗೌಡ, ಪ್ರಧಾನ ಕಾರ್ಯದರ್ಶಿಗಳು, ಅಖಿಲ ಭಾರತ ವೀರಶೈವ ಮಹಾಸಭಾ ಬ್ಯಾಟರಾಯನಪುರ ಕ್ಷೇತ್ರ ಘಟಕದ ಅಧ್ಯಕ್ಷರಾದ ಬಿ‌.ಎಸ್.ಅನಿಲ್ ಕುಮಾರ್, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯರಾದ ಬಿ.ನಾಗರಾಜ್ ಬಾಬು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಕಂಠಮೂರ್ತಿ, ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರತಾಪ್ ಗೌಡ, ಯುವ ಮೋರ್ಚಾ ಅಧ್ಯಕ್ಷ ತಿಮ್ಮೇಗೌಡ, ಬಿಜೆಪಿ ಮುಖಂಡರಾದ ಗೋವಿಂದರಾಜು, ರವಿ, ಗಂಗಾಧರ್, ನರೇಂದ್ರ ಬಾಬು, ನಂದೀಶ್, ರಾಕೇಶ್, ವೀರಶೈವ ಲಿಂಗಾಯತ ಸಮುದಾಯದ ಮುಖಂಡರಾದ ಉಮೇಶ್, ಮಲ್ಲೇಶ್, ಗುರು ಸೇರಿದಂತೆ ಇನ್ನಿತರ ಗಣ್ಯರಿದ್ದು, ಬಿ.ಎಸ್.ಬಸವರಾಜು ಅವರಿಗೆ ಜನ್ಮದಿನದ ಶುಭ ಹಾರೈಸಿದರು.

Leave a Reply

Your email address will not be published. Required fields are marked *