




ಅಭಿಮಾನಿಗಳಿಂದ ಶಾಸಕ ಪ್ರದೀಪ್ ಈಶ್ವರ್ ಅವರ ಹುಟ್ಟುಹಬ್ಬ ಆಚರಣೆ
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಹುಟ್ಟುಹಬ್ಬವನ್ನು ಇಂದು ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಅರ್ಥಪೂರ್ಣವಾಗಿ ಆಚರಿಸಿದರು. ನಗರದ ಕೈವಾರ ತಾತಯ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ,ಅನ್ನಸಂತರ್ಪಣೆ, ಮುಸ್ಲಿಂ ಬಾಂಧವರು ದರ್ಗಾ ದಲ್ಲಿ ಪ್ರಾರ್ಥನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಮಂಚೇನಹಳ್ಳಿಯಲ್ಲಿ ಶಾಸಕ ಪ್ರದೀಪ್ ಈಶ್ವರ್
ಅಭಿಮಾನಿಗಳು ರಕ್ತದಾನ ಶಿಬಿರ ಏರ್ಪಡಿಸಿದ್ದರು. ನೂರಾರು ಅಭಿಮಾನಿಗಳು ರಕ್ತದಾನ ಮಾಡಿ ಶಾಸಕರಿಗೆ ಹುಟ್ಟುಹಬ್ಬದ ಶುಭ ಹಾರೈಸಿದರು. ಗ್ರಾಮೀಣ ಪ್ರದೇಶಗಳಲ್ಲೂ ಅಭಿಮಾನಿಗಳು ಹುಟ್ಟುಹಬ್ಬದ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ಕೇಕ್ ಕತ್ತರಿಸಿ ಸಂಭ್ರಮಿಸಿದರು.
ಕಾಂಗ್ರೆಸ್ ಯುವ ಮುಖಂಡ ವಿನಯ್ ಬಂಗಾರಿ ಹಾಗೂ ಟಿಎಪಿಸಿಎಂಎಸ್ ನಿರ್ದೇಶಕ ಬಿಸೇಗಾರಹಳ್ಳಿ ನಾಗೇಶ್ ಅವರ ನೇತೃತ್ವದಲ್ಲಿ ಕೈವಾರ ತಾತಯ್ಯ ದೇವಸ್ಥಾನದಲ್ಲಿ 501 ತೆಂಗಿನಕಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ದೇವರಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಆಯುಷ್ಯ,ಆರೋಗ್ಯ ಹಾಗೂ ರಾಜಕೀಯವಾಗಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.ನಂತರ ನಗರದ ಖಾಸಗಿ ಬಸ್ ನಿಲ್ದಾಣ ಹಾಗೂ ಬಲಮುರಿ ವೃತ್ತದಲ್ಲಿ ಬಿರಿಯಾನಿ ವಿತರಿಸುವ ಮೂಲಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಈ ವೇಳೆ ಮಾತನಾಡಿದ ವಿನಯ್ ಬಂಗಾರಿ,ಶಾಸಕ ಪ್ರದೀಪ್ ಈಶ್ವರ್ ಕೇವಲ ರಾಜಕಾರಣಿ ಅಲ್ಲ, ಜನಸೇವೆಯೇ ಅವರ ಮೂಲ ಉದ್ದೇಶವಾಗಿದೆ ಎಂದು ಹೇಳಿದರು.ಕ್ಷೇತ್ರದ ಜನರ ಆರೋಗ್ಯ ರಕ್ಷಣೆಗೆ ಬದ್ಧರಾಗಿರುವ ಅವರು ಅಮ್ಮಆಂಬ್ಯುಲೆನ್ಸ್‌ಗಳನ್ನು ನೀಡುವ ಮೂಲಕ ಅನೇಕ ಪ್ರಾಣಗಳನ್ನು ಉಳಿಸಿದ್ದಾರೆ. ‘ನಮ್ಮೊರಿಗೆ ನಮ್ಮ ಶಾಸಕ’ಕಾರ್ಯಕ್ರಮದಡಿ ಮನೆಮನೆಗೆ ತೆರಳಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ.
ಅಲ್ಲದೆ,ವಿದ್ಯಾರ್ಥಿಗಳಿಗೆ ವೇತನ ವಿತರಿಸುವ ಮೂಲಕ ಅವರ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡುತ್ತಿದ್ದಾರೆ.ಮುಂದಿನ ದಿನಗಳಲ್ಲಿ ಅವರು ಸಚಿವರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ ಎಂದರು.
ಟಿಎಪಿಸಿಎಂಎಸ್ ನಿರ್ದೇಶಕ ಬಿಸೇಗಾರಹಳ್ಳಿ ನಾಗೇಶ್ ಮಾತನಾಡಿ ಸ್ಥಾನ ಸಿಕ್ಕ ಬಳಿಕ ಸುಮ್ಮನೆ ಕೂತುಬಿಡುವ ಜನಪ್ರತಿನಿಧಿ ನಮ್ಮ ಶಾಸಕರು ಅಲ್ಲ ಎಂದು ಹೇಳಿದರು. ಕ್ಷೇತ್ರದ ಜನರಿಗೆ ಸಿಗಬೇಕಾದ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಪ್ರದೀಪ್ ಈಶ್ವರ್ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ.ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ಜೀವ ರಕ್ಷಕ ಆಂಬ್ಯುಲೆನ್ಸ್‌ಗಳನ್ನು ಒದಗಿಸಿದ್ದಾರೆ.ಜೊತೆಗೆ ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬುವ ಕಾರ್ಯದಲ್ಲೂ ತೊಡಗಿಸಿಕೊಂಡಿದ್ದಾರೆ.ಅವರ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದಿನಸಿ ಕಳುಹಿಸಲಾಗಿದೆ.ಮುಂದಿನ ದಿನಗಳಲ್ಲಿ ಅವರು ಸಚಿವರಾಗಬೇಕೆಂದು ನಾವು ಹಾರೈಸುತ್ತೇವೆ ಎಂದರು.
ಡಾನ್ಸ್ ಶ್ರೀನಿವಾಸ್ ಮಾತನಾಡಿ ಶಾಸಕ ಪ್ರದೀಪ್ ಈಶ್ವರ್ ಸಾಮಾಜಿಕ ಕಳಕಳಿಯ ಜನಸೇವಕರು ಶಾಸಕರಾಗಿ ಆಯ್ಕೆಯಾದ ಮೇಲೆ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಸಾಮನ್ಯ ಪ್ರಜೆ ರಾಜಕೀಯಕ್ಕೆ ಬಂದರೆ ಸಮಾಜಕ್ಕೆ ಏನು ಮಾಡಬಹುದು ಎಂದು ತೂರಿಸಿದ್ದಾರೆ. ಶೈಕ್ಷಣಿಕ ಆರೋಗ್ಯ ಸಂಭಂದಪಟ್ಟಾಗಿ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಮನೆ ಮನೆಗೆ ತೆರಳಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದು ಇದು ಜನಪರ ಕಾಳಜಿಯನ್ನು ಬಿಂಬಿಸುತ್ತದೆ ಮುಂದಿನ ದಿನಗಳಲ್ಲಿ ಅವರು ಸಚಿವರಾಗಿ ಬಂದು ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಮಂಡಿಕಲ್ ಮಂಚೇನಹಳ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಭೂಷಣ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಕ್ಷಿತ್ ರೆಡ್ಡಿ,ಹಿರಿಯ ಮುಖಂಡ ನಾಯನಹಳ್ಳಿ ನಾರಾಯಣಸ್ವಾಮಿ,
ಮಂಗಳಪ್ರಕಾಶ್,ಪೆರೆಸಂದರ ರಮೇಶ್, ಅರವಿಂದ್, ಪೆದ್ದಣ್ಣ,ಹಮೀಮ್,ಮಹಮದ್ ಜಾಫರ್,ನವೀನ್,ಉಮೇಶ್. ಜಿ,
ಚೇತನ್,ಕರವೇ ಶ್ರೀಧರ್,ಸಾಧಿಕ್ ಪಾಷ,ಬಾಬಾ ಜಾನ್ ಮತ್ತು ಇತರರು ಉಪಸ್ಥಿತರಿದ್ದರು.
( ಮುಬಷೀರ್ ಅಹಮದ್ )
