ನಂದಿ ಬ್ರಹ್ಮರಥೋತ್ಸವಕ್ಕೆ ಉಚಿತ ಆಟೋ ಸೇವೆಗೆ ಹರೀಶ್.ಕೆ ರೆಡ್ಡಿ ಚಾಲನೆ

ಚಿಕ್ಕಬಳ್ಳಾಪುರ: ತಾಲೂಕಿನ ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಹೊಂದಿರುವ ನಂದಿ ಗ್ರಾಮದ ಶ್ರೀ ಭೋಗ ನಂದೀಶ್ವರ ಸ್ವಾಮಿ ದೇವಾಲಯದಲ್ಲಿ ಶಿವರಾತ್ರಿ ಪ್ರಯುಕ್ತ ರಾತ್ರಿ ಜಾಗರಣೆ ಮಾಡುವ ಹಾಗೂ ಇಂದು ಶ್ರೀ ಭೋಗ ನಂದೀಶ್ವರ ಸ್ವಾಮಿ ಜೋಡಿ ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ನಂದಿ ಗ್ರಾಮಕ್ಕೆ ತೆರಳುವ ಶಿವ ಭಕ್ತರಿಗಾಗಿ ನಗರ ದಿಂದ ನಂದಿಗೆ, ನಂದಿ ಕ್ರಾಸ್ ನಿಂದ ನಂದಿಗೆ ಆಟೋ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಶ್ರೀ ಹರಿಕೃಷ್ಣ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಹರೀಶ್. ಕೆ ರೆಡ್ಡಿ ತಿಳಿಸಿದರು.
ಅವರು ನಗರದ ಪಂಚಮುಖಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿ, ನಂತರ ಉಚಿತ ಆಟೋ ಸೇವೆಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಶಿವರಾತ್ರಿ ಪ್ರಯುಕ್ತ ಶ್ರೀ ಭಗನಂದೀಶ್ವರ ಸ್ವಾಮಿ ದೇವಾಲಯಕ್ಕೆ ತೆರಳುವ ಭಕ್ತರಿಗೆ ಶಿವರಾತ್ರಿ ಮತ್ತು ಮರುದಿನ ಉಚಿತ ಆಟೋ ಸೇವೆ ಕಲ್ಪಿಸಿ ಕೊಡುವುದಾಗಿ ನಾನು ಕೆಲವು ದಿನಗಳ ಹಿಂದೆ ಹೇಳಿದ್ದೆ. ಅದರಂತೆ ನಡೆದುಕೊಂಡಿದ್ದೇನೆ ಈ ಸದುಪಯೋಗ ವನ್ನು ಶಿವಭಕ್ತರು ಪಡೆದುಕೊಳ್ಳಬೇಕೆಂದು ವಿನಂತಿಸುತ್ತೇನೆ ಎಂದರು.
ಶ್ರೀ ಭಗನಂದೀಶ್ವರ ಸ್ವಾಮಿ ದೇವಾಲಯದಲ್ಲಿ ಕರ್ನಾಟಕ ತೆಲಂಗಾಣ ಆಂಧ್ರ ಮುಂತಾದ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದಾರೆ ಆದರೆ ಅವರಿಗೆ ಕನಿಷ್ಠ ಮೂಲಭೂತ ಸೌಲಭ್ಯಗಳು ಇಲ್ಲ ಭಕ್ತಾದಿಗಳು ತುಂಬಾ ಪರದಾಡುತ್ತಿದ್ದಾರೆ. ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಬೇಕು ಎಂದು ನಾನು ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಳ್ಳುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಶ್ರೀ ಹರಿಕೃಷ್ಣ ಚಾರಿಟಬಲ್ ಟ್ರಸ್ಟ್ ಸಂಸ್ಥೆಯ ಸದಸ್ಯರು ಹಾಗೂ ಹರೀಶ್.ಕೆ ರೆಡ್ಡಿ ಅವರ ಸ್ನೇಹಿತರು ಹಾಜರಿದ್ದರು.
( ಮುಬಷೀರ್ ಅಹಮದ್ )

Leave a Reply

Your email address will not be published. Required fields are marked *