
ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸ್ನೇಹ ಮಿಲನ ಸಮಾರಂಭ
ದಿನಾಂಕ 28.02.2026ರಂದು ಥಣಿಸಂದ್ರ ಮುಖ್ಯ ರಸ್ತೆಯಲ್ಲಿರುವ ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ ಮಧ್ಯಾಹ್ನ 2 ಗಂಟೆಗೆ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಸಮಾರಂಭ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ನಂದ ಎನ್ ಅವರು ತಿಳಿಸಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಿಂಧಿ ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀ ಪ್ರಕಾಶ್ ಎಫ್ ಮಾಧ್ವಾನಿಯವರು ವಹಿಸಲಿದ್ದಾರೆ. ಸಿಂಧಿ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಅಶೋಕ್ ಪಿ ನಾರಂಗ್ ಅವರು ಹಾಗೂ ಕಾಲೇಜಿನ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿರುತ್ತಾರೆ. ಸಮಾರಂಭವು ಹಳೆಯ ವಿದ್ಯಾರ್ಥಿ ಕೂಟದ ಉದ್ಘಾಟನೆಯೊಂದಿಗೆ ಆರಂಭವಾಗಿ ಪ್ರಾಂಶುಪಾಲರ ಪ್ರಾಸ್ತಾವಿಕ ಭಾಷಣ, ಹಳೆಯ ವಿದ್ಯಾರ್ಥಿಗಳ ಕಾಲೇಜಿನ ಸವಿ ನೆನಪಿನ ಚರ್ಚೆ, ಕಾಲೇಜಿನ ಉನ್ನತಿಗೆ ಸಲಹೆ ಸೂಚನೆಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
