ಕೇಂದ್ರದ ಅನುದಾನದ ಕಾಮಗಾರಿಗಳಿಗೆ ಶೀಘ್ರದಲ್ಲೇ ಚಾಲನೆ : ಡಾ.ಕೆ.ಸುಧಾಕರ್ ಭರವಸೆ
ಯಲಹಂಕ : ಯಲಹಂಕ ಕ್ಷೇತ್ರಕ್ಕೆ ಕೇಂದ್ರದಿಂದ ತಂದಿರುವ ಅನುದಾನದ ಕಾಮಗಾರಿಗಳಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಸಂಸದ ಡಾಕ್ಟರ್ ಕೆ ಸುಧಾಕರ್ ತಿಳಿಸಿದರು.
ಯಲಹಂಕ ಕ್ಷೇತ್ರದ ಕೊಂಡಶೆಟ್ಟಿಹಳ್ಳಿ ಗ್ರಾಮದ ಬಿಜೆಪಿ ಮುಖಂಡ ಐವರಕಂಡಪುರ ಅಜಯ್ ಅವರ ಮನೆಯ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ‘ಕಾಮಗಾರಿ ಚಾಲನೆ ಕುರಿತಂತೆ ಯಲಹಂಕ ಕ್ಷೇತ್ರದ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಿ, ದಿನಾಂಕ ನಿಗದಿಪಡಿಸಿ ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯಕ್ರಮಕ್ಕೂ ಮುನ್ನ ಬೃಹತ್ ಬೈಕ್ ರ್ಯಾಲಿಯ ಮೂಲಕ ಸಂಸದರನ್ನು ಸ್ವಾಗತಿಸಲಾಯಿತು.
ಕಾರ್ಯಕ್ರಮದಲ್ಲಿ ಹಿರಿಯ ಬಿಜೆಪಿ ಮುಖಂಡ ಎಚ್.ಬಿ. ಹನುಮಯ್ಯ, ಹಿರಿಯ ಜೆಡಿಎಸ್ ಮುಖಂಡರಾದ ಇ.ಕೃಷ್ಣಪ್ಪ, ಹನುಮಂತೇಗೌಡ, ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಸತೀಶ್ ಕಡತನಮಲೆ, ಹಿರಿಯ ಮುಖಂಡ ಲಕ್ಷ್ಮಿಪುರ ಸೀನಪ್ಪ, ಜೆಡಿಎಸ್ ರಾಜ್ಯ ಉಪಾಧ್ಯಕ್ಷೆ ಕವಿತಾ ರೆಡ್ಡಿ, ಯಲಹಂಕ ಕ್ಷೇತ್ರ ಜೆಡಿಎಸ್ ಅಧ್ಯಕ್ಷ ವೇಣುಗೋಪಾಲ್, ಮಹಾ ಪ್ರಧಾನ ಕಾರ್ಯದರ್ಶಿ, ಗಂಗಲಿಂಗಯ್ಯ, ಬಿಜೆಪಿ ಮುಖಂಡರಾದ ಐವರಕಂಡಪುರ ಅಜಯ್, ಕೆ.ಸಿ.ಬಾಬು, ಅರಕೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಆರ್.ತಿಮ್ಮೇಗೌಡ, ಬೆಂ.ನಗರ ಜಿಲ್ಲಾ ಬಿಜೆಪಿ ಮಾಜಿ ಕಾರ್ಯದರ್ಶಿ ಚಂದ್ರಶೇಖರ್ ಆಜಾದ್ ಸೇರಿದಂತೆ ಇನ್ನಿತರರಿದ್ದರು.

Leave a Reply

Your email address will not be published. Required fields are marked *