







ಬೆಂಗಳೂರು ವಿಭಾಗೀಯ ಪ್ರಭಾರಿಗಳಾಗಿ ಎಸ್ಎನ್ ರಾಜಣ್ಣ ಆಯ್ಕೆ :
ಯಲಹಂಕ : ಯಲಹಂಕ ಕ್ಷೇತ್ರದ ಹಿರಿಯ ಬಿಜೆಪಿ ಮುಖಂಡರಾದ ಎಸ್ಎನ್ ರಾಜಣ್ಣ ಅವರನ್ನು ಭಾರತೀಯ ಜನತಾ ಪಕ್ಷದ ಬೆಂಗಳೂರು ವಿಭಾಗೀಯ ಪ್ರಭಾರಿಗಳನ್ನಾಗಿ ಆಯ್ಕೆ ಮಾಡಲಾಗಿದೆ.
ಮೂಲತಃ ಸಂಘ ಪರಿವಾರದ ಹಿನ್ನೆಲೆಯಿಂದ ಬಂದಿರುವ ಎಸ್.ಎನ್. ರಾಜಣ್ಣ ಅವರು ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲದಿಂದ ಹಿಂದೂಪರ ಹೋರಾಟಗಳು ಹಾಗೂ ಬಿಜೆಪಿ ಪಕ್ಷದ ಬಲವರ್ಧನೆಗಾಗಿ ಶ್ರಮಿಸಿದ್ದು, ರಾಜಕೀಯವಾಗಿ ಅಪಾರ ಅನುಭವ ಹೊಂದಿದ್ದಾರೆ.
ಬಿಜೆಪಿ ಪಕ್ಷದ ಏಳಿಗೆಗಾಗಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ತಮಗೆ ಬೆಂಗಳೂರು ವಿಭಾಗೀಯ ಪ್ರಭಾರಿ ಜವಾಬ್ದಾರಿ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಹಾಗೂ ಯಲಹಂಕ ಶಾಸಕರಾದ ಎಸ್.ಆರ್.ವಿಶ್ವನಾಥ್ ಅವರಿಗೆ ಎಸ್.ಎನ್.ರಾಜಣ್ಣ ಕೃತಜ್ಞತಾಪೂರ್ವಕ ಧನ್ಯವಾದ ತಿಳಿಸಿದ್ದಾರೆ.
ಬಿಜೆಪಿ ಬೆಂಗಳೂರು ವಿಭಾಗೀಯ ಪ್ರಭಾರಿಗಳಾಗಿ ಆಯ್ಕೆಯಾಗಿರುವ ಎಸ್.ಎನ್.ರಾಜಣ್ಣ ಅವರಿಗೆ ಹಿರಿಯ ಬಿಜೆಪಿ ಮುಖಂಡ ದಿಬ್ಬೂರು ಜಯಣ್ಣ, ಬಿಜೆಪಿ ಯುವ ಮುಖಂಡರು, ವಿಶ್ವವಾಣಿ ಫೌಂಡೇಶನ್ ನ ನಿರ್ದೇಶಕ ಅಲೋಕ್ ವಿಶ್ವನಾಥ್, ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಎಂ.ಜಿ.ರಾಮಮೂರ್ತಿ ಪ್ರಧಾನ ಕಾರ್ಯದರ್ಶಿಗಳಾದ ಅದ್ದೆ ವಿಶ್ವನಾಥಪುರ ಮಂಜುನಾಥ್, ಸೋಮಶೇಖರ್, ಯಲಹಂಕ ನಗರ ಮಂಡಲ ಬಿಜೆಪಿ ಅಧ್ಯಕ್ಷ ಎಂ.ಮುನಿರಾಜು, ಪ್ರಧಾನ ಕಾರ್ಯದರ್ಶಿಗಳಾದ ವಿ.ಎಮ್.ಈಶ್ವರ್, ವಿ.ಪವನ್ ಕುಮಾರ್, ಬಿಜೆಪಿ ಮುಖಂಡರಾದ ಪ್ರಶಾಂತ್ ರೆಡ್ಡಿ, ಅವಲಹಳ್ಳಿ ಕೇಶವಮೂರ್ತಿ, ಕಿರಣ್ ಕುಮಾರ್, ಜಿ.ಸಿ.ಮಂಜುನಾಥ್, ನಂಜೇಗೌಡ, ಹೇಮಂತ್ ಕುಮಾರ್, ಕೆ.ಬಾಬು, ಮಲ್ಲೇಶ್, ಮುನಿಕೃಷ್ಣ ಸೇರಿದಂತೆ ಹಲವು ಗಣ್ಯರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
