ಜೆಡಿಎಸ್ ಬೆಂಗಳೂರು ಉತ್ತರ ಜಿಲ್ಲಾ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಎಂ. ಕವಿತಾರೆಡ್ಡಿ ಆಯ್ಕೆ :

ಯಲಹಂಕ : ಜೆಡಿಎಸ್ ಬೆಂಗಳೂರು ಉತ್ತರ ಜಿಲ್ಲಾ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಯಲಹಂಕ ಉಪನಗರದ ಎಂ.ಕವಿತಾರೆಡ್ಡಿ ಅವರನ್ನು ಆಯ್ಕೆ ಟಮಾಡಲಾಗಿದೆ.

ಬೆಂಗಳೂರು ಉತ್ತರ ಜಿಲ್ಲಾ ಮಹಿಳಾ ವಿಭಾಗದ ಅಧ್ಯಕ್ಷ ಸ್ಥಾನದ ಪಕ್ಷದ ಅಧಿಕೃತ ಪ್ರಮಾಣ ಪತ್ರವನ್ನು ಕವಿತಾ ರೆಡ್ಡಿ ಅವರು ಮಾಜಿ ಶಾಸಕರಾದ ಅನಿತಾ ಕುಮಾರಸ್ವಾಮಿ ಅವರಿಂದ ಸ್ವೀಕರಿಸಿದರು.

ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಈ ಕೃಷ್ಣಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ರಮೇಶ್ ಗೌಡ, ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ ಸೇರಿದಂತೆ ಇನ್ನಿತರ ಗಣ್ಯರಿದ್ದರು.

Leave a Reply

Your email address will not be published. Required fields are marked *