



ದಿನಾಂಕ 10.03 2026ರಂದು ಥಣಿಸಂದ್ರ ಮುಖ್ಯ ರಸ್ತೆಯಲ್ಲಿರುವ ಸಿಂಧಿ ಪದವಿ ಪೂರ್ವ
ಕಾಲೇಜಿನ ಪ್ರಾಂಶುಪಾಲರಾದ ಡಾ. ನಂದ ಎನ್ ಅವರು ಮಾತನಾಡಿ ನಮ್ಮ ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ ವಿಶೇಷವಾಗಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾಡಿದ್ದೇವೆ.
ಆಧುನಿಕ ಯುಗದಲ್ಲಿ ಮಹಿಳೆ ಎಲ್ಲ ರಂಗಗಳಲ್ಲಿ ಅಪ್ರತಿಮ ಸಾಧನೆ ಮಾಡುತ್ತಿದ್ದು, ಭಾರತದ ಆರ್ಥಿಕತೆಯ ಬೆಳವಣಿಗೆಯಲ್ಲಿ ಮಹಿಳೆಯ ಪಾತ್ರವೂ ಸಹ ಗಣನೀಯವಾಗಿದೆ. ಹಿಂದೆ ಅಡುಗೆ ಮನೆಗೆ ಅಷ್ಟೇ ಸೀಮಿತರಾಗಿದ್ದ ಮಹಿಳೆಯರು ಇಂದು ಅಂತರಿಕ್ಷ ಯಾನ, ಆರ್ಥಿಕ, ಸಾಮಾಜಿಕ, ವೈಜ್ಞಾನಿಕ, ಕ್ಷೇತ್ರಗಳಲ್ಲಿ ಗಣನೀಯ ಮಟ್ಟದ ಸಾಧನೆ ಮಾಡುತ್ತಿದ್ದಾರೆ. ಆದರೆ ಕೆಲ ಗ್ರಾಮೀಣ ಭಾಗಗಳಲ್ಲಿ ಮಹಿಳೆಯ ಸ್ಥಿತಿಗತಿ ಇನ್ನೂ ಸುಧಾರಿಸಬೇಕಿದೆ. ಆರ್ಥಿಕವಾಗಿ ಮಹಿಳೆಯರು ಸಬಲರಾಗಬೇಕು ನಮ್ಮ ಕಾಲೇಜಿನ ಆಡಳಿತ ಮಂಡಳಿಯ ವತಿಯಿಂದ ನಮ್ಮ ಸುತ್ತಮುತ್ತಲಿರುವ 04 ಆರಕ್ಷಕ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿ ವರ್ಗದವರಿಗೆ ದಿನನಿತ್ಯ ಬಳಸುವ ಸಣ್ಣ ಕಾಣಿಕೆಗಳನ್ನು ನೀಡುವ ಮೂಲಕ ಅವರಿಗೆ ಶುಭ ಕೋರಿದರು ಹಾಗೂ ಕಾಲೇಜಿನ ಎಲ್ಲಾ ಮಹಿಳಾ ಸಿಬ್ಬಂದಿ ವರ್ಗದವರಿಗೂ ಆಡಳಿತ ಮಂಡಳಿ ಕಡೆಯಿಂದ ಶುಭ ಕೋರಿದರು. ಕಾರ್ಯಕ್ರಮ ಬಹಳ ಯಶಸ್ವಿಯಾಯಿತು.
