ಸಿಂಗನಾಯಕನಹಳ್ಳಿಯ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ವಿಜೃಂಭಣೆಯ ಶ್ರೀರಾಮನವಮಿ ಆಚರಣೆ :

ಯಲಹಂಕ : ಯಲಹಂಕ ಕ್ಷೇತ್ರದ ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ಅನಾದಿಕಾಲದಿಂದಲೂ ನೆಲೆಸಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಶ್ರೀರಾಮನವಮಿ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಶ್ರೀರಾಮನವಮಿ ಪ್ರಯುಕ್ತ ದೇವಾಲಯವನ್ನು ತಳಿರು ತೋರಣ, ಪುಷ್ಪಗಳಿಂದ ಅಲಂಕರಿಸಿ,ಶ್ರೀರಾಮ,ಸೀತಾ,ಲಕ್ಷ್ಮಣ ಸಹಿತವಾಗಿ ಶ್ರೀ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ, ಹೋಮ ಹವನ ನೆರವೇರಿಸುವ ಮೂಲಕ ಭಕ್ತಿ ಸಮರ್ಪಿಸಲಾಯಿತು. ಶ್ರೀರಾಮನವಮಿ ಅಂಗವಾಗಿ ಮೆರವಣಿಗೆ, ಸಾರ್ವಜನಿಕರಿಗೆ ಮಜ್ಜಿಗೆ, ಪಾನಕ, ಕೋಸಂಬರಿ ವಿತರಿಸಿ ರಾಮನವಮಿ ಯನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಸಿಂಗನಾಯಕನಹಳ್ಳಿ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಡಾ.ವಾಣಿಶ್ರೀ ವಿಶ್ವನಾಥ್, ಬಿಜೆಪಿ ಯುವ ಮುಖಂಡರು, ವಿಶ್ವವಾಣಿ ಫೌಂಡೇಶನ್ ನ ನಿರ್ದೇಶಕರಾದ ಅಲೋಕ್ ವಿಶ್ವನಾಥ್, ಪಲ್ಲವಿ ಅಲೋಕ್, ಬಿಜೆಪಿ ಮುಖಂಡರಾದ ಎಂ.ಮುನಿರಾಜು, ವಿ.ಪವನ್ ಕುಮಾರ್, ಎಚ್.ಎಸ್.ಕಿರಣ್, ಸುನಿಲ್ ಕುಮಾರ್ ರಾಮನವಮಿಯ ಈ ವಿಶೇಷ ಆಚರಣೆಯಲ್ಲಿ ಪಾಲ್ಗೊಂಡು, ನಮಿಸಿ, ಭಕ್ತಿ ಸಮರ್ಪಿಸಿದರು.

ರಾಮನವಮಿಯ ವಿಶೇಷ ಆಚರಣೆಯ ಪೂಜೆಯ ನೇತೃತ್ವವನ್ನು ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀಶೈಲಮೂರ್ತಿ ಅವರು ವಹಿಸಿದ್ದು, ಹಲವು ಆಗಮಿಕರು ವಿಶೇಷ ಪೂಜೆ ನೆರವೇರಿಸಿದರು.

Leave a Reply

Your email address will not be published. Required fields are marked *